ಭದ್ರಾವತಿಯ ವ್ಯಕ್ತಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ₹61,000 ದಂಡ, ಏನಿದು ಪ್ರಕರಣ?

ಶಿವಮೊಗ್ಗ: 16 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ 21 ವರ್ಷದ ಯುವಕನಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹61,000 ದಂಡ ವಿಧಿಸಿ ಆದೇಶಿಸಿದೆ.  (ಈ ಸುದ್ದಿಯನ್ನು ಇನ್ನು 32 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

2023ರಲ್ಲಿ ಬಾಲಕಿಯ ಮೇಲೆ ದೌರ್ಜನ್ಯ ನಡೆದಿತ್ತು. ಈ ಬಗ್ಗೆ ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. 

ಇದನ್ನೂ ಓದಿ » ಶಿವಮೊಗ್ಗದ ರೈತನಿಗೆ ಲಕ್ಷ ಲಕ್ಷ ಮೋಸ, ಆಗಿದ್ದೇನು?

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಪ್ರಕರಣದ ತನಿಖೆ ನಡೆಸಿದ್ದ ಭದ್ರಾವತಿ ನಗರ ವೃತ್ತದ ಸಿಪಿಐ ಶ್ರೀಧರ್ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ವಕೀಲ ಶ್ರೀಧರ್ ವಾದ ಮಂಡಿಸಿದ್ದರು. ವಿಚಾರಣೆ ವೇಳೆ ಆರೋಪ ದೃಢಪಟ್ಟಿದ್ದರಿಂದ ನ್ಯಾಯಾಧೀಶ ನಿಂಗನಗೌಡ ಪಾಟೀಲ್ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Shimoga District Court

Leave a Comment