ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | ಸಾಗರ | 26 ಸೆಪ್ಟೆಂಬರ್ 2019
ಸಾಗರದ ಗಣಪತಿ ಕೆರೆ ಕಾಮಗಾರಿ ಸ್ಥಳವನ್ನು ಶಾಸಕ ಹರತಾಳು ಹಾಲಪ್ಪ ಪರಿಶೀಲನೆ ನಡೆಸಿದರು. ಕೆರೆ ಭಾಗ ಒತ್ತುವರಿ ಆಗದಂತೆ ತಡೆಗಟ್ಟಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಗಣಪತಿ ಕೆರೆ ಸುತ್ತಲು ಡ್ರೈನೇಜ್ ತೆಗೆಸಲಾಗುತ್ತಿದೆ. ಕೊಳಚೆ ನೀರು ಗಣಪತಿ ಕೆರೆ ಸೇರಬಾರದು ಮತ್ತು ಕೆರೆ ಜಾಗ ಒತ್ತವರಿ ಮಾಡಬಾರದು ಅನ್ನುವ ಉದ್ದೇಶದಿಂದ ಡ್ರೈನೇಜ್ ತೆಗೆಸಲಾಗುತ್ತಿದೆ.
ಈಗಾಗಲೆ ಒಂದು ಭಾಗದಲ್ಲಿ ಡ್ರೈನೇಜ್ ಕೆಲಸ ಪೂರ್ಣಗೊಂಡಿದೆ. ಮತ್ತೊಂದು ಭಾಗದಲ್ಲಿ ಡ್ರೈನೇಜ್ ತೆಗೆಸಲು ಸ್ಥಳ ಪರಿಶೀಲನೆ ನಡೆಸಲಾಗಿದೆ ಎಂದು ಶಾಸಕ ಹರತಾಳು ಹಾಲಪ್ಪ ತಿಳಿಸಿದ್ದಾರೆ. ಪರಿಶೀಲನೆ ವೇಳೆ ಉಪವಿಭಾಗಾಧಿಕಾರಿ ಡಾ.ಎಲ್.ನಾಗರಾಜ್, ಪೌರಾಯುಕ್ತ ಎಸ್.ರಾಜು, ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತ ಹೆಚ್.ಕೆ.ನಾಗಪ್ಪ, ನಗರಸಭೆ ಸದಸ್ಯರಾದ ಟಿ.ಡಿ.ಮೇಘರಾಜ್, ಆರ್.ಶ್ರೀನಿವಾಸ್, ವಿ.ಮಹೇಶ್, ಅರವಿಂದ ರಾಯ್ಕರ್, ವಿನಾಯಕ ರಾವ್, ಬಿ.ಟಿ.ರವೀಂದ್ರ ಸೇರಿದಂತೆ ಹಲವರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





