ಶಿವಮೊಗ್ಗ ಮೆಗ್ಗಾನ್‌ ಆಸ್ಪತ್ರೆ ವಿರುದ್ಧ ಜಿಲ್ಲಾಧಿಕಾರಿಗೆ ದೂರು, ಏನೇನಿದೆ ಕಂಪ್ಲೇಂಟ್‌ನಲ್ಲಿ?

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷ್ಯ, ಭ್ರಷ್ಟಾಚಾರ ಮತ್ತು ಅವ್ಯವಸ್ಥೆ ಮಿತಿಮೀರಿದೆ. ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಎಸ್‌ಡಿಪಿಐ ಜಿಲ್ಲಾ ಘಟಕದ ಅಧ್ಯಕ್ಷ ಜೀಲಾನ್ ಖಾನ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಸುದ್ದಿಯ ಮುಂದಿನ ಭಾಗ ಕೆಳಗಿದೆ

ವೈದ್ಯರು ಮತ್ತು ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ನವೆಂಬರ್‌ 28ರಂದು ನೂರ್ ಅಫ್‌ಶಾ ಎಂಬ ಬಾಣಂತಿ ಸಾವಿಗೀಡಾಗಿದ್ದಾರೆ. ಆಕೆಯ ಕುಟುಂಬಕ್ಕೆ ತಕ್ಷಣ ಪರಿಹಾರ ನೀಡಬೇಕು ಎಂದು ಎಸ್‌ಡಿಪಿಐ ಕಾರ್ಯಕರ್ತರು ಆಗ್ರಹಿಸಿದರು.

‘ಲಂಚ ಕೊಟ್ಟರಷ್ಟೆ ಮಗು ಕೊಡ್ತಾರೆʼ

ಮೆಗ್ಗಾನ್‌ ಆಸ್ಪತ್ರೆಯ ಹೆರಿಗೆ ವಿಭಾಗದಲ್ಲಿ ಹೆಣ್ಣು ಮಗುವಿಗೆ ₹1,000 ಮತ್ತು ಗಂಡು ಮಗುವಿಗೆ ₹2,000 ಲಂಚ ಕೊಡಬೇಕು. ಆಗ ಮಾತ್ರ ಮಗುವನ್ನು ಪೋಷಕರಿಗೆ ಹಸ್ತಾಂತರಿಸುವ ಪದ್ಧತಿ ಇದೆ. ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌದ್ರಿ ಇತ್ತೀಚೆಗೆ ಮೆಗ್ಗಾನ್‌ ಆಸ್ಪತ್ರೆಗೆ ಭೇಟಿ ನೀಡಿದ್ದಾಗ ಸಾರ್ವಜನಿಕರು ಈ ಸಂಬಂಧ ದೂರು ಸಲ್ಲಿಸಿದ್ದರು ಎಂದು ಎಸ್‌ಡಿಪಿಐ ಕಾರ್ಯಕರ್ತರು ಆರೋಪಿಸಿದರು.

Nanjappa Hospital Advertisement

SDPI-workers-memorandum-against-Mc-Gann-Hospital-staff

ಇದನ್ನೂ ಓದಿ » ಡಿಸೆಂಬರ್‌ನಲ್ಲಿ ಯಾವೆಲ್ಲ ಫೋನ್‌ಗಳು ಮಾರುಕಟ್ಟೆಗೆ ಲಗ್ಗೆ ಇಡುತ್ತಿವೆ? ಇಲ್ಲಿದೆ ಪಟ್ಟಿ

ಮೃತ ಬಾಣಂತಿ ನೂರ್ ಅಫ್‌ಶಾಳ ಕುಟುಂಬಕ್ಕೆ ಪರಿಹಾರ ನೀಡಬೇಕು. ಆಸ್ಪತ್ರೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು. ಅಗತ್ಯ ಸಿಬ್ಬಂದಿ ನೇಮಿಸಬೇಕು. ಉತ್ತಮ ಆರೋಗ್ಯ ಸೇವೆ ಒದಗಿಸಬೇಕೆಂದು ಎಂದು ಎಸ್‌ಡಿಪಿಐ ಆಗ್ರಹಿಸಿದೆ.

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
Shivamogga Live Promotion

Leave a Comment