BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್‌ ಆದೇಶ, ಯಾಕೆ?

ಶಿವಮೊಗ್ಗ: ರೈತರೊಬ್ಬರಿಗೆ ಪರಿಹಾರ ನೀಡಲು ವಿಳಂಬ ಮಾಡಿದ್ದಕ್ಕಾಗಿ ಶಿವಮೊಗ್ಗ ಜಿಲ್ಲಾಧಿಕಾರಿಯ ಕಾರು (Innova Car) ಜಪ್ತಿ (seizure) ಮಾಡುವಂತೆ ನ್ಯಾಯಾಲಯ ಆದೇಶಿಸಿದೆ. ➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ವಸತಿ ಯೋಜನೆಗಾಗಿ ಹರಮಘಟ್ಟದ ಕೃಷಿಕ ನಂದಾಯಪ್ಪ ಅವರ ಒಂದು ಎಕರೆ ಜಮೀನನ್ನು 1992ರಲ್ಲಿ ಸರ್ಕಾರ ವಶಕ್ಕೆ ಪಡೆದಿತ್ತು. ಇದಕ್ಕೆ ₹22 ಲಕ್ಷ ಪರಿಹಾರ ನೀಡವುದಾಗಿ ತಿಳಿಸಿದ್ದ ಸರ್ಕಾರ ಕೇವಲ ₹9 ಲಕ್ಷ ನೀಡಿತ್ತು. ಬಾಕಿ ಹಣಕ್ಕಾಗಿ ರೈತ ನಂದಾಯಪ್ಪ ಕಚೇರಿಗೆ ಅಲೆದಾಡಿದರು ಫಲ ಸಿಕ್ಕಿರಲಿಲ್ಲ. ಕೊನೆಗೆ ನಂದಾಯಪ್ಪ ಕೋರ್ಟ್‌ (Shiomga Court) ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ಎರಡನೇ ಹಿರಿಯ ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ₹95,88,283 ಪರಿಹಾರವನ್ನು ಪಾವತಿಸುವಂತೆ ಸೂಚಿಸಿತ್ತು.

Shimoga-DC-Car.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬಸ್‌ ಹತ್ತಿ ಆಧಾರ್‌ ಕಾರ್ಡ್‌ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್‌, ಆಗಿದ್ದೇನು?

ನ್ಯಾಯಾಲಯದ ಆದೇಶವಾಗಿದ್ದರು ಪರಿಹಾರ ನೀಡದ ಹಿನ್ನೆಲೆ ಜಿಲ್ಲಾಧಿಕಾರಿ ಬಳುತ್ತಿರುವ KA 14 G 1234 ನಂಬರ್‌ನ ಕಾರು ಜಪ್ತಿ ಮಾಡುವಂತೆ ಶಿವಮೊಗ್ಗದ ಎರಡನೆ ಹಿರಿಯ ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ.

ಶಿವಮೊಗ್ಗ JNNCE ಕಾಲೇಜಿನಲ್ಲಿ ADMISSION ಶುರು
JNNCE College Admission 2026
📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!