ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ನಗರದ ಕೋಟೆ ಶ್ರೀ ಸೀತಾ ರಾಮಾಂಜನೇಯ ಸ್ವಾಮಿ ದೇವಾಲಯದ ಶ್ರೀ ಸೀತಾ ಕಲ್ಯಾಣ (Sita Kalyana) ಶತಮಾನೋತ್ಸವ ಸಮಿತಿ ಆಶ್ರಯದಲ್ಲಿ ಡಿಸೆಂಬರ್ 7ರಿಂದ ಜನವರಿ 5ರವರೆಗೆ ಶ್ರೀ ಸೀತಾ ಕಲ್ಯಾಣ ಶತಮಾನೋತ್ಸವ ಹಾಗೂ ಕೋಟಿತ್ರಯ ರಾಮಾನಾಮಾರ್ಚನ ಮಹೋತ್ಸವ ಆಯೋಜಿಸಲಾಗಿದೆ ಎಂದು ದೇವಸ್ಥಾನದ ಪ್ರಧಾನ ಅರ್ಚಕ ಭಾರ್ಗವರಾಮ ತಿಳಿಸಿದರು.
ಕೋಟೆ ಶ್ರೀ ಸೀತಾ ರಾಮಾಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅರ್ಚಕ ಭಾರ್ಗವರಾಮ, ಡಿಸೆಂಬರ್ 7ರಂದು ಬೆಳಗ್ಗೆ ಮಹಾಸಂಕಲ್ಪ, ನವಗ್ರಹ ಪೂಜೆ ಮೂಲಕ ಮಹೋತ್ಸವಕ್ಕೆ ಚಾಲನೆ ನೀಡಲಾಗುತ್ತದೆ. 30 ದಿನ ನಿರಂತರ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಯಾವ್ಯಾವ ದಿನ ಏನೇನು ಕಾರ್ಯಕ್ರಮ?
ಡಿ.8 ರಿಂದ ಡಿ.17ರವರೆಗೆ ಶ್ರೀ ಭಾಗವತ ಮಹಾ ಪುರಾಣ ಹೋಮ ನಡೆಯಲಿದೆ. ಬೆಂಗಳೂರಿನ ಹೆಚ್.ಆರ್. ಶ್ರೀಧರ್ ರವರಿಂದ ಪ್ರತಿದಿನ ಸಂಜೆ 6.30ಕ್ಕೆ ಭಾಗವತ ಸಪ್ತಾಹ ಉಪನ್ಯಾಸ ನಡೆಯಲಿದೆ. ಡಿ.15 ರಿಂದ 17ರವರೆಗೆ ಕಲ್ಲಾಪುರದ ಪವಮಾನ ಆಚಾರ್ ಅವರಿಂದ ವಿಷ್ಣುವಿನ ದಶಾವತಾರ ಪ್ರವಚನ, ದಶಾವತಾರ ಉತ್ಸವ ನಡೆಯಲಿದೆ.
ಡಿ.18ರಿಂದ ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ರಾಜ್ಯದ ನಾನಾ ಭಾಗದ ಕಲಾವಿದರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಇದನ್ನೂ ಓದಿ » ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
[su_quote cite=”ರಾಮ್‌ಪ್ರಸಾದ್, ಪ್ರಧಾನ ಅರ್ಚಕ“]ಡಿ.18ರಂದು ಸಪ್ತ ಚಿರಂಜೀವಿಗಳ ಪೂಜೆ ಹೋಮ ನಡೆಯಲಿದೆ. ಸಂಜೆ ಮತ್ತೂರು ಸನತ್‌ಕುಮಾರ್, ಅಚ್ಯುತ ಅವಧಾನಿಯವರಿಂದ ಸೀತಾ ಕಲ್ಯಾಣ ಗಮಕ ವಾಚನ ವ್ಯಾಖ್ಯಾನ. ಡಿ.19ರಂದು ಎಳ್ಳು ಅಮಾವಾಸ್ಯೆ ಭಾಗವಾಗಿ ಶಕ್ತಿದೇವತೆಗಳ ಸಮಾವೇಶ. ಡಿ.20ರಂದು ಮಾರುತಿ ಹೋಮ, ಸಂಜೆ ಉಸ್ತಾದ್ ಹುಮಾಯೂನ್ ಹರ್ಲಾಪುರ, ನೌಷಾದ್ ಹರ್ಲಾಪುರ, ನಿಷಾದ್ ಹರ್ಲಾಪುರ ಅವರಿಂದ ಹಿಂದೂಸ್ಥಾನೀ ಸಂಗೀತ, ದಾಸವಾಣಿ ಕಾಯಕ್ರಮ ನಡೆಯಲಿದೆ.[/su_quote]

ಶಕ್ತಿ ದೇವತೆಗಳ ಸಮಾಗಮ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೀನದಯಾಳು, ವಿಶ್ವ ಹಿಂದೂ ಪರಿಷದ್ ಮತ್ತು ಶಕ್ತಿ ದೇವತೆಗಳ ಸಮಾಗಮ ಸಮಿತಿ ವತಿಯಿಂದ 27ನೇ ವರ್ಷದ ಶಕ್ತಿ ದೇವತೆಗಳ ಸಮಾಗಮ ಕಾರ್ಯಕ್ರಮ ಆಯೋಜಿಸಲಾಗಿದೆ. ಡಿ.19ರಂದು ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















