ಶಿವಮೊಗ್ಗ ಲೈವ್
ರಿಪ್ಪನ್‌ಪೇಟೆ: ಸವಾರನ ನಿಯಂತ್ರಣ ತಪ್ಪಿದ ಬೈಕ್ ಮರಕ್ಕೆ ಡಿಕ್ಕಿ (Fatal Bike Accident) ಹೊಡೆದ ಪರಿಣಾಮ ಹಿಂಬದಿ ಸವಾರ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಡ್ರಿಗೆ ಗ್ರಾಮದಲ್ಲಿ ಭಾನುವಾರ ಘಟನೆ ಸಂಭವಿಸಿದೆ. (ಈ ಸುದ್ದಿಯನ್ನು ಇನ್ನು 28 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಿಣಸೆ ಗ್ರಾಮದ ನಿವಾಸಿ ಶಿವಪ್ಪ ಎಂಬುವರ ಪುತ್ರ ಮಂಜುನಾಥ (35) ಮೃತ ವ್ಯಕ್ತಿ. ಮಂಜುನಾಥ, ಹೊಸನಗರದಲ್ಲಿ ಗ್ರಾಮಒನ್ ನಡೆಸುತ್ತಿದ್ದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಹಾಡಹಗಲೆ ಶಿಕ್ಷಕಿಯ ಪರ್ಸ್ ಕಸಿದು ಎಸ್ಕೇಪ್, ಎಲ್ಲಿ? ಹೇಗಾಯ್ತು ಘಟನೆ?
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ
ಗಿಣಸೆ ಗ್ರಾಮದ ರೋಹಿತ್(26) ಗಾಯಗೊಂಡಿದ್ದು, ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಿಪ್ಪನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
