ಶಿವಮೊಗ್ಗದಲ್ಲಿ ಕಲರ್ಸ್‌ ಕನ್ನಡ ‘ಗಿಚ್ಚಿ ಗಿಲಿಗಿಲಿ’ ಆಡಿಷನ್, ಎಲ್ಲಿ? ಯಾರೆಲ್ಲ ಭಾಗವಹಿಸಬಹುದು?

ಶಿವಮೊಗ್ಗ: ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ ರಿಯಾಲಿಟಿ ಷೋಗಾಗಿ ಡಿ. 14ರಂದು ಬೆಳಗ್ಗೆ 10 ಗಂಟೆಗೆ ಶಿವಮೊಗ್ಗದ ಸವಳಂಗ ರಸ್ತೆಯಲ್ಲಿರುವ ಬಸವೇಶ್ವರ ನಗರದ 3ನೇ ಕ್ರಾಸ್‌ನಲ್ಲಿರುವ ಆಕ್ಸ್‌ಫರ್ಡ್ ಇಂಗ್ಲಿಷ್ ಸ್ಕೂಲ್‌ನ ಆವರಣದಲ್ಲಿ ಆಡಿಷನ್ (Audition) ನಡೆಯಲಿದೆ. (ಈ ಸುದ್ದಿಯನ್ನು ಇನ್ನು 29 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

5 ರಿಂದ 12 ವರ್ಷ ವಯೋಮಿತಿಯ ಮಕ್ಕಳು ಈ ಆಡಿಷನ್‌ನಲ್ಲಿ ಭಾಗವಹಿಸಬಹುದು. ಆಸಕ್ತ ಮಕ್ಕಳು ನಿಗದಿತ ದಿನಾಂಕದಂದು ಪೋಷಕರೊಂದಿಗೆ ಭಾವಚಿತ್ರ, ಮಕ್ಕಳ ಮತ್ತು ಪೋಷಕರ ಆಧಾರ್ ಕಾರ್ಡ್‌ ಜೆರಾಕ್ಸ್ ಪ್ರತಿ ಸಹಿತ ಆಡಿಷನ್‌ಗೆ ಹಾಜರಾಗಬೇಕು ಎಂದು ಕಲರ್ಸ್ ಕನ್ನಡ ವಾಹಿನಿಯ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಿದ್ದರಾಮಯ್ಯ ವಿರುದ್ಧ ಮಹಿಳೆಯರು ಆಕ್ರೋಶ, ತಕ್ಷಣ ಕ್ಷಮೆಗೆ ಒತ್ತಾಯ, ಕಾರಣವೇನು?

SHIMOGA-NEWS-UPDATE

Leave a Comment