ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ದೇಶೀಯ ಉತ್ಪಾದನಾ ಸಾಮರ್ಥ್ಯ ಹಾಗೂ ದೇಶದ ಶ್ರೀಮಂತ ಸಾಂಸ್ಕೃತಿಕ ಪರಂಪರೆಗೆ ಆದ್ಯತೆ ನೀಡುವ ಉದ್ದೇಶದಿಂದ ನಗರದ ಬಂಟರ ಭವನದಲ್ಲಿ ‘ದೇಸಿ ಮೇಳ-ಪರಂಪರೆ’ (Desi Mela) ಶೀರ್ಷಿಕೆಯಡಿ ಡಿ.12ರಿಂದ ಮೂರು ದಿನ ಸ್ವದೇಶಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ ಹಮ್ಮಿ ಕೊಳ್ಳಲಾಗಿದೆ ಎಂದು ಮೇಳದ ಆಯೋಜಕ ಪ್ರೊ. ಬಿ.ಎಂ.ಕುಮಾರಸ್ವಾಮಿ ತಿಳಿಸಿದರು.
ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಎರಡು ದಿನ ಕುಡಿಯುವ ನೀರು ಬರಲ್ಲ, ಯಾವ್ಯಾವ ದಿನ?
ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರಲ್ಲಿ ದೇಶೀಯ ವಸ್ತುಗಳನ್ನು ಕೊಳ್ಳುವ ಮತ್ತು ಬಳಸಲು ಪ್ರೇರಣೆ ನೀಡಲು ಹಾಗೂ ಜನರಲ್ಲಿ ಆರ್ಥಿಕ ದೇಶಭಕ್ತಿ ಮೂಡಿಸುವ ಉದ್ದೇಶದಿಂದ ಮೇಳ ಆಯೋಜಿಸಲಾಗಿದೆ. ಇದರಿಂದ ಜಿಲ್ಲೆಯ ಉತ್ಪಾದಕರಿಗೆ ಅನುಕೂಲವಾಗುತ್ತದೆ ಎಂದರು.

ಇದನ್ನೂ ಓದಿ » ₹67 ಲಕ್ಷ ಕಳೆದುಕೊಂಡ ಶಿವಮೊಗ್ಗದ 22 ವರ್ಷದ ಯುವತಿ, ಆಗಿದ್ದೇನು?
ಮೇಳದಲ್ಲಿ ಜಿಲ್ಲೆಯ ಉತ್ಪನ್ನಗಳು, ಕರಕುಶಲ ವಸ್ತುಗಳು ಸೇರಿದಂತೆ ಮಹಿಳಾ ಮತ್ತು ಯುವ ಉದ್ದಿಮೆದಾರರ ಉತ್ಪನ್ನಗಳ ಪ್ರದರ್ಶನ ಇರಲಿದೆ. ಗೃಹ ಉತ್ಪನ್ನಗಳು, ಹ್ಯಾಂಡ್‌ಮೇಡ್ ಹಾಸಿಗೆ ಮತ್ತು ಹೊದಿಕೆಗಳು, ಮಣ್ಣಿನ ಉತ್ಪನ್ನಗಳು, ಖಾದಿ ಉತ್ಪನ್ನಗಳು, ಖಾದ್ಯಗಳು, ಅಲಂಕಾರಿಕ ವಸ್ತುಗಳು ಲಭ್ಯವಿರಲಿವೆ. ಆತ್ಮನಿರ್ಭರ ಭಾರತ ಕಲ್ಪನೆಗೆ ಅನುಗುಣವಾಗಿ ಕಾರ್ಯಕ್ರಮ ರೂಪಿಸಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು ಸಹ ನಡೆಯಲಿವೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಅರವಿಂದ್, ದಿಲೀಪ್, ಲಿಂಗರಾಜು, ಜಯವರ್ಧನ್ ಇದ್ದರು.
LATEST NEWS
- ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್ ಇನ್ಸ್‌ಪೆಕ್ಟರ್ ಸಚಿನ್ ಅಂತ್ಯಕ್ರಿಯೆ

- ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

- ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

- ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

- ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

About The Editor
ನಿತಿನ್ ಆರ್.ಕೈದೊಟ್ಲು














