ಶಿವಮೊಗ್ಗ – ಆಯನೂರು ರಸ್ತೆಯಲ್ಲಿ ಅಪಘಾತ, ಕಾರಿನ ಮುಂಭಾಗ ನಜ್ಜುಗುಜ್ಜು

 ಶಿವಮೊಗ್ಗ  LIVE 

ಶಿವಮೊಗ್ಗ: ಖಾಸಗಿ ಬಸ್‌ ಮತ್ತು ಸ್ಯಾಂಟ್ರೊ ಕಾರು ಮುಖಾಮುಖಿ (Head On Accident) ಡಿಕ್ಕಿಯಾಗಿದ್ದು ಕಾರಿನಲ್ಲಿದ್ದ ಒಬ್ಬರು ಗಾಯಗೊಂಡಿದ್ದಾರೆ. ಶಿವಮೊಗ್ಗ ತಾಲೂಕು ವೀರಗಾರನ ಬೈರನಕೊಪ್ಪದಲ್ಲಿ ಅಪಘಾತ ಸಂಭವಿಸಿದೆ.

ಇದನ್ನೂ ಓದಿ » ₹67 ಲಕ್ಷ ಕಳೆದುಕೊಂಡ ಶಿವಮೊಗ್ಗದ 22 ವರ್ಷದ ಯುವತಿ, ಆಗಿದ್ದೇನು?

ಗಜಾನನ ಬಸ್‌ ಶಿವಮೊಗ್ಗದಿಂದ ಆಯನೂರು ಕಡೆಗೆ ತೆರಳುತ್ತಿತ್ತು. ಕಾರು ಆಯನೂರು ಕಡೆಯಿಂದ ಶಿವಮೊಗ್ಗದ ಕಡೆಗೆ ಹೋಗುತ್ತಿತ್ತು. ಮುಖಾಮುಖಿ ಅಪಘಾತದಲ್ಲಿ ಕಾರು ನಜ್ಜಗುಜ್ಜಾಗಿದೆ. ಕಾರಿನಲ್ಲಿದ್ದ ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ. ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Car-and-Bus-head-on-collision-in-Shimoga-Ayanuru-Road

ಕುಂಸಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದರು.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment