ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ: ಫಾರಂ ಕೋಳಿಗಳನ್ನು (Chicken) ಸಾಗಿಸುತ್ತಿದ್ದ ಕ್ಯಾಂಟರ್ ಲಾರಿ ಪಲ್ಟಿಯಾಗಿದ್ದು, ಕೋಳಿಗಳೆಲ್ಲ ಚೆಲ್ಲಾಪಿಲ್ಲಿಯಾಗಿ ರಸ್ತೆ ಬದಿಗೆ ಬಿದ್ದಿವೆ. ದಾರಿಯಲ್ಲಿ ಹೋಗುತ್ತಿದ್ದ ಜನರು ಕೋಳಿಗಳನ್ನು ಹೊತ್ತೊಯ್ದಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದ 2 ಪ್ರಮುಖ ರೈಲ್ವೆ ಮಾರ್ಗ ಯೋಜನೆ ಸ್ಥಗಿತ, ಸಂಸದ ರಾಘವೇಂದ್ರ ಆಕ್ರೋಶ, ಕಾರಣವೇನು?
ಹೊಳೆಹೊನ್ನೂರು ಸಮೀಪದ ಮಲ್ಲಾಪುರ ಗ್ರಾಮದ ದೇವಸ್ಥಾನದ ತಿರುವಿನಲ್ಲಿ ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕ್ಯಾಂಟರ್ ಲಾರಿ ಪಲ್ಟಿಯಾಗಿದೆ. ಕೋಳಿಗಳನ್ನು ಹೊತ್ತು ಆನವೇರಿ ಕಡೆಗೆ ಲಾರಿ ಸಾಗುತ್ತಿತ್ತು.
ಇನ್ನು, ಲಾರಿಯಿಂದ ಹೊರಬಿದ್ದ ಫಾರಂ ಕೋಳಿಗಳನ್ನು ಜನರು ಹೊತ್ತೊಯ್ದಿದ್ದಾರೆ. ದಾರಿಯಲ್ಲಿ ಹೋಗುತ್ತಿದ್ದವರೆಲ್ಲ ಎರಡ್ಮೂರು ಕೋಳಿಗಳನ್ನು ಹೊತ್ತೊಯ್ದಿದ್ದಾರೆ. ಅಪಘಾತದ ರಭಸಕ್ಕೆ ನೂರಾರು ಕೋಳಿಗಳು ಸಾವನ್ನಪ್ಪಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ವಿಡಿಯೋ, ಮಾಹಿತಿ: ಅನಿಲ್

LATEST NEWS
- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






