ಭದ್ರಾವತಿಯಲ್ಲಿ ರೈಲಿನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಶಿವಮೊಗ್ಗದಲ್ಲಿ ಸಾವು

 ಶಿವಮೊಗ್ಗ  LIVE 

ಶಿವಮೊಗ್ಗ: ಭದ್ರಾವತಿ ಸಮೀಪ ರೈಲಿನಿಂದು (Train) ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತರ ವಾರಸುದಾರರು ಇದ್ದಲ್ಲಿ ರೈಲ್ವೆ ಪೊಲೀಸರನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ » ಮಹಿಳೆಯರಿಗೆ ಗುಡ್‌ ನ್ಯೂಸ್‌, ಶಿವಮೊಗ್ಗದಲ್ಲಿ ನಾಳೆ ಉತ್ಸವ್‌ ಮೇಳ, ಏನೇನೆಲ್ಲ ಇರುತ್ತೆ?

ನವೆಂಬರ್‌ 28ರಂದು ವ್ಯಕ್ತಿಯೊಬ್ಬರು ರೈಲಿನಿಂದ ಬಿದ್ದು ಗಾಯಗೊಂಡಿದ್ದರು. ಅವರನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಅವರು ಮೃತಪಟ್ಟಿದ್ದಾರೆ. ಮೃತರಿಗೆ ಅಂದಾಜು 45 ವರ್ಷ ವಯಸ್ಸಾಗಿದೆ. 5.5 ಅಡಿ ಎತ್ತರವಿದ್ದಾರೆ. ಸಾಧಾರಣ ಮೈಕಟ್ಟು, ಗೋಧಿ ಮೈ ಬಣ್ಣ, ಕೋಲು ಮುಖ ಇದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಾರಸುದಾರರು ಇದ್ದಲ್ಲಿ ಶಿವಮೊಗ್ಗ ರೈಲ್ವೆ ಪೊಲೀಸ್ ಸಬ್-ಇನ್ಸಪೆಕ್ಟರ್‌ ಅವರನ್ನು ಸಂಪರ್ಕಿಸಲು ತಿಳಿಸಲಾಗಿದೆ. ಪೊನ್‌ ನಂಬರ್‌: 08182-222974 ಸಂಪರ್ಕಿಸಬಹುದಾಗಿದೆ.

ಇದನ್ನೂ ಓದಿ » ಶಿವಮೊಗ್ಗದ 2 ಪ್ರಮುಖ ರೈಲ್ವೆ ಮಾರ್ಗ ಯೋಜನೆ ಸ್ಥಗಿತ, ಸಂಸದ ರಾಘವೇಂದ್ರ ಆಕ್ರೋಶ, ಕಾರಣವೇನು?

ಇದನ್ನೂ ಓದಿ » ರೈಲ್ವೆ ಪ್ರಯಾಣಿಕರೆ ಗಮನಿಸಿ, ರಾಜ್ಯದ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ, ಯಾವಾಗ?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment