ಗ್ಯಾರಂಟಿ ಯೋಜನೆಗಳು ಚುನಾವಣೆ ಲಕ್ಷ್ಮಿ, ಶಿವಮೊಗ್ಗದಲ್ಲಿ ವಿಜಯೇಂದ್ರ ವಿಶ್ಲೇಷಣೆ, ಏನಿದು?

 ಶಿವಮೊಗ್ಗ  LIVE 

ಶಿವಮೊಗ್ಗ: ಸರ್ಕಾರದಲ್ಲಿ ಮುಖ್ಯಮಂತ್ರಿ ಹುದ್ದೆಗಾಗಿ ಪೈ ಪೋಟಿ ನಡೆಯುತ್ತಿದೆ. ಸರ್ಕಾರ ಬದುಕಿದ್ದೂ ಸತ್ತಂತಾಗಿದೆ ಎಂದು ಬಿಜೆಪಿ ರಾ‍ಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (Vijayendra ) ಆರೋಪಿಸಿದರು.

ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಜಯೇಂದ್ರ, . ಕಾಂಗ್ರೆಸ್ ಪಕ್ಷದ ಆಂತರಿಕ ಗೊಂದಲ ಮತ್ತು ಇಚ್ಛಾಶಕ್ತಿಯ ಕೊರತೆಯಿಂದಾಗಿ ರಾಜ್ಯದ ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

BY Vijayendra Press meet in Shimoga BJP office

ವಿಜಯೇಂದ್ರ ಏನೇನು ಹೇಳಿದರು?

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳು, ರೈತರ, ಬಡವರ ಹಾಗೂ ನೇಕಾರರ ಸಮಸ್ಯೆಗಳ ಬಗ್ಗೆ ಸಮಗ್ರವಾಗಿ ಚರ್ಚೆ ಆಗಬೇಕು. ಆದರೆ ಮುಖ್ಯಮಂತ್ರಿ ಕುರ್ಚಿಗೆ ಪೈಪೋಟಿ ನಡೆಯುತ್ತಿರುವುದೇ ಹೆಚ್ಚಾಗಿದೆ. ಸಮಸ್ಯೆ ಬಗೆಹರಿಸಿಕೊಳ್ಳದೆ ಅಧಿವೇಶನ ನಡೆಸುವುದರಿಂದ ಪ್ರಯೋಜನ ಇಲ್ಲ. ಸಾಧ್ಯವಾದರೆ ಅಧಿವೇಶನವನ್ನು ಮುಂದೂಡಿ ಎಂದು ಈ ಹಿಂದೆಯೇ ಹೇಳಿದ್ದೆವು. ಆದರೆ ಇದಕ್ಕೆ ಕಿವಿಗೊಡದೆ ಅಧಿವೇಶನ ಪ್ರಾರಂಭಿಸಲಾಗಿದೆ ಎಂದರು.  

ಒಗ್ಗಟ್ಟಿನ ಮಂತ್ರ ಜಪಿಸುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈಗ ಒಬ್ಬರಿಗೊಬ್ಬರು ಪ್ರತಿಸ್ಪರ್ಧಿಸುತ್ತಿದ್ದಾರೆ. ಇದರಿಂದ ರಾಜ್ಯದ ಮೇಲೆ ಪರಿಣಾಮ ಉಂಟಾಗುತ್ತಿದೆ. ಜ್ವಲಂತ ಸಮಸ್ಯೆಗಳಿಗೆ ಮುಖ್ಯಮಂತ್ರಿ ಸ್ಪಂದಿಸಬೇಕು. ಆದರೆ ಕುರ್ಚಿ ಕದನದಿಂದಾಗಿ ಸಮಸ್ಯೆಗಳು ಹೆಚ್ಚಾಗುತ್ತಿದೆ ಎಂದು ಆರೋಪಿಸಿದರು.

ವಿಜಯೇಂದ್ರ ಹೇಳಿದ ಮತ್ತಷ್ಟು ಪ್ರಮುಖಾಂಶ

ಪಾಯಿಂಟ್‌ 1: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ನೀರಾವರಿ ಯೋಜನೆಗಳಿಗೆ ಪ್ರತಿ ವರ್ಷ ₹30,000 ಕೋಟಿ ನೀಡುತ್ತೇವೆ. ಐದು ವರ್ಷದಲ್ಲಿ ಒಟ್ಟು ₹1.5 ಲಕ್ಷ ಕೋಟಿ ನೀಡುತ್ತೇವೆ ಎಂದು ಭರವಸೆ ಕೊಟ್ಟಿತ್ತು. ಆದರೆ ಆ ಭರವಸೆಯನ್ನೇ ಕಾಂಗ್ರೆಸ್‌ ಮರೆತಿದೆ.

BY Vijayendra Press meet in Shimoga BJP office

ಪಾಯಿಂಟ್‌ 2: ಗೃಹಲಕ್ಷ್ಮಿ ಸೇರಿದಂತೆ ಎಲ್ಲಾ ಗ್ಯಾರಂಟಿ ಯೋಜನೆಗಳು ಚುನಾವಣಾ ಲಕ್ಷ್ಮಿಗಳಾಗಿವೆ.‌ ಲೋಕಸಭೆ ಚುನಾವಣೆಗು ಮುನ್ನ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡಿದ್ದರು. ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ಘೋಷಣೆಯಾದರೆ, ಮತದಾನದ ಮೂರು ದಿನ ಮುಂಚೆ ಬಾಕಿ ಹಣ ಬಿಡುಗಡೆ ಮಾಡುತ್ತಾರೆ. ಈ ಯೋಜನೆಗಳು ಜನರ ಕಲ್ಯಾಣಕ್ಕೋಸ್ಕರ ಅಲ್ಲ. ಬಡತನವನ್ನೇ ಜೋಕ್ ಮಾಡುವ ಉಡಾಫೆ ಯೋಜನೆಗಳಾಗಿವೆ.

ಪಾಯಿಂಟ್‌ 3: ತಮ್ಮ ವೈಫಲ್ಯ ಮರೆಮಾಚಲು ರಾಜ್ಯ ಸರ್ಕಾರ ಪದೇ ಪದೆ ಕೇಂದ್ರ ಸರ್ಕಾರವನ್ನು ದೂರುತ್ತಿದೆ. ಕೇಂದ್ರದ ಯೋಜನೆಗಳಿಗೆ ಸಹಕಾರ ನೀಡುತ್ತಿಲ್ಲ. ಜನೌಷಧಿ ಕೇಂದ್ರದ ಯೋಜನೆಗೆ ಕಾಂಗ್ರೆಸ್ ಸರ್ಕಾರ ಕಲ್ಲು ಹಾಕುವ ಕೆಲಸ ಮಾಡುತ್ತಿದೆ. ಇತ್ತೀಚೆಗೆ ಹೈಕೋರ್ಟ್ ಕೂಡ ಇದೇ ವಿಷಯಕ್ಕೆ ಛೀಮಾರಿ ಹಾಕಿದೆ. ಹಿಂದಿನ ಬಿಜೆಪಿ ಸರ್ಕಾರ ನೀಡಿದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೆ ರಾಜ್ಯದ ಕೊಡುಗೆ ಸಮರ್ಪಕವಾಗಿಲ್ಲ. ರೈತ ವಿದ್ಯಾನಿಧಿ ಹಾಗೂ ಭಾಗ್ಯಲಕ್ಷ್ಮಿ ಯೋಜನೆಗಳನ್ನು ನಿಲ್ಲಿಸುವ ಅಥವಾ ಕುಂಠಿತಗೊಳಿಸುವ ಕೆಲಸ ಮಾಡಲಾಗುತ್ತಿದೆ.

ಇದನ್ನೂ ಓದಿ » ಸಾಗರ ಬಂದ್‌, ದಿನಾಂಕ ಪ್ರಕಟಿಸಿದ ಹೋರಾಟ ಸಮಿತಿ, ಬಂದ್‌ಗೆ ಕಾರಣವೇನು?

ಪಾಯಿಂಟ್‌ 4: ದ್ವೇಷ ಭಾಷಣ ತಡೆಗೆ ಶಾಸನ ತರಲು ಸರ್ಕಾರ ಪ್ರಯತ್ನಿಸುತ್ತಿದೆ. ಇದು 1975ರ ಇಂದಿರಾ ಗಾಂಧಿಯವರ ತುರ್ತು ಪರಿಸ್ಥಿತಿಯನ್ನು ನೆನಪು ಮಾಡುವಂತಿದೆ. ವಿರೋಧ ಪಕ್ಷಗಳು, ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ವೈಫಲ್ಯ ಟೀಕಿಸುವುದನ್ನು ತಡೆಯುವ ಷಡ್ಯಂತ್ರವಾಗಿದೆ. ವಿಧಾನಸಭೆಯಲ್ಲಿ ಇದರ ವಿರುದ್ಧ ಗಟ್ಟಿಧ್ವನಿ ಎತ್ತುತ್ತೇವೆ. ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಅಂದವರನ್ನು ಶಿಕ್ಷಿಸಲು ಆಗದವರು ದ್ವೇಷ ಭಾಷಣದ ಬಗ್ಗೆ ಮಾತನಾಡುತ್ತಾರೆ.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್‌, ಶಾಸಕರಾದ ಎಸ್‌.ಎನ್.ಚನ್ನಬಸಪ್ಪ, ಡಾ. ಧನಂಜಯ ಸರ್ಜಿ ಸೇರಿ ಹಲವರು ಇದ್ದರು.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment