ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ತೀರ್ಥಹಳ್ಳಿ: ರಾಮೇಶ್ವರ ದೇವರ ಎಳ್ಳಮಾವಾಸ್ಯೆ ಜಾತ್ರೆ (Ellamavasya Jatre) ಡಿ.17 ರಿಂದ 22ರವರೆಗೆ ₹25 ಲಕ್ಷ ವೆಚ್ಚದಲ್ಲಿ ಅದ್ದೂರಿಯಾಗಿ ನಡೆಸಲು ತೀರ್ಮಾನಿಸಲಾಗಿದೆ ಎಂದು ರಾಮೇಶ್ವರ ಎಳ್ಳಮಾವಾಸ್ಯೆ ಜಾತ್ರೆಯ ಗೌರವಾಧ್ಯಕ್ಷ, ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಇದನ್ನೂ ಓದಿ » ಡೆವಿಲ್ ಸಿನಿಮಾ ಸಂಭ್ರಮಾಚರಣೆ ಮುಗಿಸಿ ತೆರಳುವಾಗ ಅಪಘಾತ, ಯುವಕ ಸಾವು
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆರಗ ಜ್ಞಾನೇಂದ್ರ, ಡಿ.17 ರಂದು ಗಣಪತಿ ಪೂಜೆ, ಧ್ವಜಾರೋಹಣ, 18ರಂದು ಪುರೋತ್ಸವ, 19ರಂದು ಪರಶುರಾಮ ತೀರ್ಥಪೂಜೆ, ತೀರ್ಥಾಭಿಷೇಕ ಮತ್ತು ತೀರ್ಥಸ್ನಾನ ನಡೆಯಲಿದೆ. ಸಂಜೆ ಉದಯ ಕುಮಾರ್ ಶೆಟ್ಟಿ ತಂಡದಿಂದ ನೃತ್ಯ ವೈಭವ ಹಮ್ಮಿಕೊಳ್ಳಲಾಗಿದೆ ಎಂದರು.

ಡಿ.20ರಂದು ಮನ್ಮಹಾರಥಾರೋಹಣ, ಸಂಜೆ ಆರ್.ಜಿ. ಫಿಟೈಸ್ ಕ್ಲಬ್ ವತಿಯಿಂದ ದೇಹದಾರ್ಢ ಸ್ಪರ್ಧೆ, 21ರ ಸಂಜೆ ನಿಶಾ ಸ್ಪೋರ್ಟ್ಸ್ ಕ್ಲಬ್ನಿಂದ ತುಂಗಾ ನದಿಯ ದಡದ ಮರಳು ಗುಡ್ಡೆಯ ಮೇಲೆ ವಾಲಿಬಾಲ್ ಪಂದ್ಯಾವಳಿ, ನಂತರ ರಾಮಚಂದ್ರ ಹಡಪದ ತಂಡದಿಂದ ಸಂಗೀತ ಸಂಜೆ, ತುಂಗಾ ನದಿಯಲ್ಲಿ ಸಿಡಿ ಮದ್ದು ಪ್ರದರ್ಶನದೊಂದಿಗೆ ತೆಪ್ಪೋತ್ಸವ ನಡೆಯಲಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಿ.ಆರ್.ರಾಘವೇಂದ್ರ ಶೆಟ್ಟಿ, ಪಾಂಡುರಂಗಪ್ಪ, ಗೀತಾ ರಮೇಶ್, ಜಯಪ್ರಕಾಶ್ ಶೆಟ್ಟಿ, ರತ್ನಾಕರ ಶೆಟ್ಟಿ, ಟಿ.ಜೆ.ಅನಿಲ್, ವರಲಕ್ಷ್ಮಿ, ಜ್ಯೋತಿ, ಸುರಭಿ ಕಿಶೋರ್, ನಯನ, ಅಮರನಾಥ ಶೆಟ್ಟಿ ಇದ್ದರು.
LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು





