ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ

 ಶಿವಮೊಗ್ಗ  LIVE 

ಸಾಗರ: ನಗರ ವ್ಯಾಪ್ತಿಯ ಖಾಸಗಿ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣ ಇನ್ನಿತರೆ ಕಡೆಗಳಲ್ಲಿ ಬೀದಿನಾಯಿಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಲು ನಗರಸಭೆ ಸೂಚಿಸಿದೆ (strict notice).

ಸುಪ್ರೀಂಕೋರ್ಟ್ ನಿರ್ದೇಶನದಂತೆ ಈ ಸಂಸ್ಥೆಗಳ ಆವರಣದಲ್ಲಿ ಯಾವುದೇ ಬೀದಿನಾಯಿಗಳು ವಾಸವಿದ್ದಲ್ಲಿ ಅವುಗಳನ್ನು ಪರಿಶೀಲಿಸಿ ಕೂಡಲೇ ಅವುಗಳ ಸಂಖ್ಯೆಯನ್ನು ಲೆಕ್ಕಹಾಕಿ ನಗರಸಭೆಗೆ ತಿಳಿಸಬೇಕು ಎಂದು ತಿಳಿಸಿದೆ.

Sagara-City-Muncipality-Nagarasabhe

ಸಂಸ್ಥೆ ಆವರಣದಲ್ಲಿ ಬೀದಿನಾಯಿ ಉಪಟಳ ತಡೆಯಲು ಹಾಗೂ ಬೀದಿನಾಯಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಸಂಸ್ಥೆ ವ್ಯಾಪ್ತಿಯಲ್ಲಿ ನಾಯಿ ವಾಸ ಮಾಡಲು ಅವಕಾಶ ಮಾಡಿಕೊಟ್ಟರೆ ಅದನ್ನು ಸ್ಥಳಾಂತರಿಸುವ ವೆಚ್ಚವನ್ನು ಸಂಸ್ಥೆಯಿಂದ ವಸೂಲಿ ಮಾಡಲಾಗುವುದು. ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದಲ್ಲಿ ಸಂಸ್ಥೆ ವಿರುದ್ದ ಕಾನೂನುಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಇದನ್ನೂ ಓದಿ » ಸಾಗರ ಬಂದ್‌, ದಿನಾಂಕ ಪ್ರಕಟಿಸಿದ ಹೋರಾಟ ಸಮಿತಿ, ಬಂದ್‌ಗೆ ಕಾರಣವೇನು?

ಅಲ್ಲದೇ, ಬೀದಿನಾಯಿಗಳನ್ನು ದತ್ತು ಪಡೆದು ನಗರಸಭೆ ಸೂಚಿಸಿದ ಸ್ಥಳದಲ್ಲಿ ಆಶ್ರಯ ತಾಣ ನಿರ್ಮಿಸಿ ನಿರ್ವಹಣೆ ಮಾಡಲು ಆಸಕ್ತಿಯಿರುವ ಪ್ರಾಣಿಪ್ರಿಯರು ಲಿಖಿತವಾಗಿ ಕಚೇರಿಗೆ ಅರ್ಜಿ ಸಲ್ಲಿಸಬಹದು ಎಂದು ಪೌರಾಯುಕ್ತ ಎಚ್.ಕೆ.ನಾಗಪ್ಪ ತಿಳಿಸಿದ್ದಾರೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment