ಶಿವಮೊಗ್ಗ ಲೈವ್
ತೀರ್ಥಹಳ್ಳಿ: ಅಡಿಕೆ ಎಲೆಚುಕ್ಕಿ ರೋಗಕ್ಕಾಗಿ (Spot Disease) ಮೀಸಲಿಟ್ಟಿದ್ದ ಬಾಕಿ ಹಣವನ್ನು ಬಿಡುಗಡೆಗೊಳಿಸಲು ಆರ್ಥಿಕ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ ಎಂದು ಶಾಸಕ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. (ಈ ಸುದ್ದಿಯನ್ನು ಇನ್ನು 30 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಇದನ್ನೂ ಓದಿ » ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಯ ದಿನಾಂಕ ಪ್ರಕಟ, ಯಾವ್ಯಾವ ದಿನ ಏನೇನು ನಡೆಯಲಿದೆ?
2025ರ ರಾಜ್ಯ ಬಜೆಟ್ನಲ್ಲಿ ಅಡಿಕೆ ಎಲೆಚುಕ್ಕಿ ರೋಗ ಸಂಶೋಧನೆಗೆ ಹಾಗೂ ಪರಿಹಾರಕ್ಕಾಗಿ ₹ 62 ಕೋಟಿ ಘೋಷಿಸಲಾಗಿತ್ತು. ಆದರೆ, ಇದುವರೆಗೂ ಕೇವಲ ₹ 7 ಕೋಟಿ ಬಿಡುಗಡೆಯಾಗಿದ್ದು ಬಾಕಿ ₹55 ಕೋಟಿ ಅನುದಾನವನ್ನು ತಕ್ಷಣ ಬಿಡುಗಡೆಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಇದು ಮಲೆನಾಡು ಭಾಗದ ಹೊಸನಗರ, ಸಾಗರ, ಶೃಂಗೇರಿಯ ರೈತರಿಗೆ ಸಹಕಾರಿಯಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

