ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ

 ಶಿವಮೊಗ್ಗ  LIVE 

ಸಾಗರ: ಮೈಸೂರಿನ ವ್ಯಕ್ತಿಯೊಬ್ಬರು ಸಿಗಂದೂರು ಸೇತುವೆ (Sigandur Bridge) ಮೇಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂಜಿನಿಯರ್‌ ಒಬ್ಬರ ಸಮಯ ಪ್ರಜ್ಞೆಯಿಂದ ಸದ್ಯ ಆ ವ್ಯಕ್ತಿ ಪ್ರಾಣಪಾಯದಿಂದ ಪಾರಾಗಿದ್ದಾರೆ.

ಮೈಸೂರಿನ ಆಂಜನೇಯ (47) ಎಂಬುವವರು ಇಂದು ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಿದ್ರೆ ಮಾತ್ರೆಗಳನ್ನು ಸೇವಿಸಿದ್ದ ಆಂಜನೇಯ ಸೇತುವೆ ಮೇಲಿಂದ ಶರಾವತಿ ನದಿಗೆ ಜಿಗಿಯಲು ಯತ್ನಿಸುತ್ತಿದ್ದರು ಎಂದು ಆರೋಪಿಸಲಾಗಿದೆ.

ಇದನ್ನು ಗಮನಿಸಿದ ಇಂಜಿನಿಯರ್‌ ರಂಜೇಶ್‌ ಎಂಬುವವರು ಕೂಡಲೆ ಆಂಜನೇಯ ಅವರ ಮನವೊಲಿಸಿ, ಆಂಬುಲೆನ್ಸ್‌ಗೆ ಕರೆ ಮಾಡಿ ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ರವಾನಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಆಂಜನೇಯ ಅವರನ್ನು ಶಿವಮೊಗ್ಗಕ್ಕೆ ರವಾನಿಸಲಾಗಿದೆ.

Mysore-Man-tried-to-jump-from-Siganduru-Bridge

ಇದನ್ನೂ ಓದಿ » ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ

ಲೆಕ್ಕಪರಿಶೋಧನೆ ಕೆಲಸ ಮಾಡುತ್ತಿರುವ ಆಂಜನೇಯ ಮೂಲತಃ ಮೈಸೂರಿನವರು. ವೈಯಕ್ತಿಕ ಕಾರಣದಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಆಂಜನೇಯ ಅವರು ಪ್ರಾಣಪಾಯದಿಂದ ಪಾರಾಗಿದ್ದಾರೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment