ಶಿವಮೊಗ್ಗದಲ್ಲಿ ಕಡಿಮೆಯಾದ ಚಳಿ, ತುಸು ಏರಿದ ತಾಪಮಾನ, ಇವತ್ತು ಎಲ್ಲೆಲ್ಲಿ ಎಷ್ಟಿದೆ ಉಷ್ಣಾಂಶ?

 ಶಿವಮೊಗ್ಗ  LIVE 

ಹವಾಮಾನ ವರದಿ: ಕಳೆದ ವಾರಕ್ಕೆ ಹೋಲಿಸಿದರೆ ಶಿವಮೊಗ್ಗದಲ್ಲಿ ಚಳಿ ಪ್ರಮಾಣ ತುಸು ಕಡಿಮೆಯಾಗಿದೆ. ಜಿಲ್ಲೆಯ ವಿವಿಧೆಡೆ ಕನಿಷ್ಠ ತಾಪಮಾನ ಏರಿಕೆಯಾಗಿದೆ. ಜಿಲ್ಲೆಯಲ್ಲಿ ತೀವ್ರ ಚಳಿ ಇತ್ತು. ಆದರೆ ಇವತ್ತು ಚಳಿ ಪ್ರಮಾಣ ತುಸು ಇಳಿಕೆಯಾಗಲಿದೆ. ಬಿಸಿಲಿನ ಅಬ್ಬರವು ಜೋರಿರಲಿದೆ ಎಂದು ಹವಾಮಾನ ಇಲಾಖೆ (Weather Report) ಅಂದಾಜಿಸಿದೆ.

ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗ, ಭದ್ರಾವತಿಯಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್‌. ತೀರ್ಥಹಳ್ಳಿಯಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌. ಸೊರಬ, ಹೊಸನಗರ, ಸಾಗರ, ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.‌

WEATHER-REPORT-SHIMOGA-

ಇದನ್ನೂ ಓದಿ » ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಾಲಿವುಡ್‌ ನಟರ ಫೋಟೊಗಳಿಗೆ ಚಪ್ಪಲಿ ಏಟು, ಕಾರಣವೇನು?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment