ಪತ್ರಕರ್ತರ ಸಂಘ, ಪದಾಧಿಕಾರಿಗಳ ಪದಗ್ರಹಣದ ದಿನಾಂಕ ಪ್ರಕಟ, ಯಾರೆಲ್ಲ ಏನೆಲ್ಲ ಹೇಳಿದರು?

 ಶಿವಮೊಗ್ಗ  LIVE 

ಶಿವಮೊಗ್ಗ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (Journalists Association) ಶಿವಮೊಗ್ಗ ಜಿಲ್ಲಾ ಶಾಖೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಡಿ.20ರ ಬೆಳಗ್ಗೆ ಪತ್ರಿಕಾ ಭವನದಲ್ಲಿ ಬೆಳಿಗ್ಗೆ 10.30ಕ್ಕೆ ನಡೆಯಲಿದೆ.

ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ನೂತನ ಜಿಲ್ಲಾಧ್ಯಕ್ಷ ಹೆಚ್.ಯು.ವೈದ್ಯನಾಥ್‌, ಜಿಲ್ಲಾ ಶಾಖೆಯ ನಿರ್ಗಮಿತ ಅಧ್ಯಕ್ಷ ಕೆ.ವಿ. ಶಿವಕುಮಾರ್‌ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ರಾಜ್ಯ ಅಧ್ಯಕ್ಷ ಟಿ.ವಿ.ಶಿವಾನಂದ ತಗಡೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದರು.

ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಹೆಚ್ ಬಿ. ಮದನಗೌಡ ದಿಕ್ಸೂಚಿ ಉಪನ್ಯಾಸ ನೀಡಲಿದ್ದಾರೆ. ಇದೇ ಸಂದರ್ಭ ನೂತನ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ. ಸಿ.ಲೋಕೇಶ್‌ರವರು ಪ್ರಮಾಣವಚನ ಬೋಧಿಸಲಿದ್ದಾರೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಆರ್‌.ಮಾರುತಿ, ಹಾಸನ ಘಟಕದ ಜಿಲ್ಲಾಧ್ಯಕ್ಷ ಜೆ.ಆರ್‌.ಕೆಂಚೇಗೌಡ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

171225%20Karnataka%20Karyanirata%20patrakartha%20sanga%20press%20meet

ಇದನ್ನೂ ಓದಿ » ಬೆಳ್ಳಂಬೆಳಗ್ಗೆ ಸಾಗರದ ವಿವಿಧೆಡೆ ನಡು ರಸ್ತೆಯಲ್ಲಿ ಟೈರ್‌ಗೆ ಬೆಂಕಿ, ಕಾರಣವೇನು?

ಕಾರ್ಯಕ್ರಮದಲ್ಲಿ ಸಂಘದ ರಾಜ್ಯ ಚುನಾವಣಾಧಿಕಾರಿ ಎನ್.ರವಿಕುಮಾರ್, ಜಿಲ್ಲಾ ಚುನಾವಣಾಧಿಕಾರಿ, ಸಹಕಾರ ಇಲಾಖೆಯ ಸಹಾಯಕ ನಿಬಂಧಕರು ಆದ ಟಿ.ವಿ.ಶ್ರೀನಿವಾಸ್‌ ಅವರನ್ನು ಸನ್ಮಾನಿಸಲಾಗುತ್ತದೆ. ನಿರ್ಗಮಿತ ಅಧ್ಯಕ್ಷರಾದ ಕೆ. ವಿ.ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ವಿ. ಟಿ. ಅರುಣ್‌ ಅವರನ್ನು ಪುರಸ್ಕರಿಸಲಾಗುವುದು.ಹೆಚ್‌.ಯು.ವೈದ್ಯನಾಥ್‌, ನಿಯೋಜಿತ ಅಧ್ಯಕ್ಷ

ಇದನ್ನೂ ಓದಿ » ಶೃಂಗೇರಿಯಲ್ಲಿ ತೀರ್ಥಹಳ್ಳಿ ಮೂಲದ ವಿದ್ಯಾರ್ಥಿನಿಗೆ ಹೃದಯಾಘಾತ, ಸಾವು

ಪತ್ರಕರ್ತರ ಕ್ಷೇಮಾಭಿವೃದ್ಧಿಗೆ ಶ್ರಮಿಸಿದ್ದೇವೆ. ಹಲವು ಕಾರ್ಯಾಗಾರ, ಕ್ರೀಡೆ ಆಯೋಜಿಸಿದ್ದೇವೆ‌. ಸಹಕಾರ ಸಂಘ ಸ್ಥಾಪಿಸುವ ಯೋಜನೆಯನ್ನು ಹೊಸ ತಂಡ ಮುಂದುವರೆಸಲಿದೆ. ಅತ್ಯುತ್ತಮ ಜಿಲ್ಲಾ ಸಂಘ ಎಂಬ ಹೆಸರೂ ಪಡೆದಿದೆ.ಕೆ.ವಿ.ಶಿವಕುಮಾರ್‌, ನಿರ್ಗಮಿತ ಅಧ್ಯಕ್ಷ

ಹಿಂದಿನ ಕಾರ್ಯಕಾರಿ ಮಂಡಳಿ ಉತ್ತಮವಾಗಿ ಕೆಲಸ ಮಾಡಿದೆ. ಹೊಸ ತಂಡವು ಅದೇ ಹುರುಪಿನಲ್ಲಿ ಕೆಲಸ ಮಾಡಲಿದೆ. ಪ್ರತಿ ತಿಂಗಳು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.ಆರ್‌.ಎಸ್‌.ಹಾಲಸ್ವಾಮಿ, ನಿಯೋಜಿತ ಪ್ರಧಾನ ಕಾರ್ಯದರ್ಶಿ

ನಿರ್ಗಮಿತ ಪ್ರಧಾನ ಕಾರ್ಯದರ್ಶಿ ವಿ.ಟಿ.ಅರುಣ್‌, ಉಪಾಧ್ಯಕ್ಷ ಕೆ.ಎಸ್‌.ಹುಚ್ರಾಯಪ್ಪ ಸುದ್ದಿಗೊಷ್ಠಿಯಲ್ಲಿದ್ದರು.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment