ಶಿವಮೊಗ್ಗ: ಹೋಟೆಲ್ (Hotels), ತಿಂಡಿ ಗಾಡಿಗಳಲ್ಲಿ ಆಹಾರಕ್ಕೆ ರಾಸಾಯನಿಕ ಬಣ್ಣಗಳು ಮತ್ತು ಟೇಸ್ಟಿಂಗ್ ಪೌಡರ್ ಬಳಕೆ ಮಾಡಲಾಗುತ್ತಿದೆ. ಇದರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳು ವಿಫಲವಾಗಿದ್ದಾರೆ ಎಂದು ಆರೋಪಿಸಿ ಎನ್‌ಎಸ್‌ಯುಐ ಸಂಘಟನೆ ಕಾರ್ಯಕರ್ತರು ಮಹಾನಗರ ಪಾಲಿಕೆ ಮುಂಭಾಗ ಪ್ರತಿಭಟನೆ ನಡೆಸಿದರು.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಆಹಾರ ಸುರಕ್ಷತಾ ಕಾಯ್ದೆಯಂತೆ ಹೋಟೆಲ್, ತಿಂಡಿ ಅಂಗಡಿಗಳಲ್ಲಿ ಆರೋಗ್ಯಕ್ಕೆ ಮಾರಕವಾದ ರಾಸಾಯನಿಕ ಬಣ್ಣ ಮತ್ತು ಟೇಸ್ಟಿಂಗ್ ಪೌಡರ್ ಬಳಸುವಂತಿಲ್ಲ. ಇವುಗಳ ಬಳಕೆಯಿಂದ ಕ್ಯಾನ್ಸರ್ ಬರಲಿದೆ. ಇದೇ ಕಾರಣಕ್ಕೆ ಸರ್ಕಾರ ಟೇಸ್ಟಿಂಗ್ ಪೌಡರ್, ಕೃತಕ ಬಣ್ಣ ಬಳಕೆ ನಿಷೇಧಿಸಿದೆ. ಆದರೆ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಹಲವು ಹೋಟೆಲ್‌ಗಳು ತಿಂಡಿ ಗಾಡಿಗಳಲ್ಲಿ ಟೇಸ್ಟಿಂಗ್ ಪೌಡರ್ ವ್ಯಾಪಕವಾಗಿ ಬಳಕೆ ಮಾಡಲಾಗುತ್ತಿದೆ. ಇದನ್ನು ತಡೆಯಬೇಕಿರುವ ಮಹಾನಗರ ಪಾಲಿಕೆ ಆರೋಗ್ಯ ವಿಭಾಗದ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ » ಶೃಂಗೇರಿಯಲ್ಲಿ ತೀರ್ಥಹಳ್ಳಿ ಮೂಲದ ವಿದ್ಯಾರ್ಥಿನಿಗೆ ಹೃದಯಾಘಾತ, ಸಾವು
ಶಿವಮೊಗ್ಗದಲ್ಲಿ ನಗರದಲ್ಲಿ ಕಂಡಕಂಡಲೆಲ್ಲ ಮಾಂಸಾಹಾರ ಹೋಟೆಲ್‌ಗಳು, ಚಾಟ್ಸ್, ಅಂಗಡಿಗಳು ತಲೆ ಎತ್ತುತ್ತಿವೆ. ಫುಟ್‌ಪಾತ್‌ಗಳಲ್ಲಿ ಚಿಕ್ಕ ಗಾಡಿಗಳಲ್ಲಿ ತಿಂಡಿ, ತಿನಿಸು ಮಾರಾಟ ಮಾಡಲಾಗುತ್ತಿದೆ. ಇಂತಹ ಅಂಗಡಿಗಳಿಗೆ ಪಾಲಿಕೆ ಆರೋಗ್ಯ ವಿಭಾಗದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಬೇಕು. ಟೇಸ್ಟಿಂಗ್ ಪೌಡರ್, ಕೃತಕ ಬಣ್ಣ ಬಳಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಎನ್‌ಎಸ್‌ಯುಐ ನಗರ ಅಧ್ಯಕ್ಷ ರವಿ ಕುಮಾರ್, ನಗರ ಉಪಾಧ್ಯಕ್ಷ ಆದಿತ್ಯ ಸುಭಾನ್, ವರುಣ್ ಪಂಡಿತ್, ವಿಕ್ರಮ್, ವಿಕಾಸ್, ಹಾಲಸ್ವಾಮಿ, ಕೌಶಿಕ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಇದ್ದರು.
LATEST NEWS
- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

- ಶಿವಮೊಗ್ಗ ಸಿಟಿಯ ಹಲವೆಡೆ ಜನವರಿ 29, 30ರಂದ ಅರ್ಧ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





