ಶಿವಮೊಗ್ಗ LIVE
ಶಿವಮೊಗ್ಗ: ಕಾಂಗ್ರೆಸ್ ನಾಯಕರ ವಿರುದ್ಧ ದಾಖಲಾಗಿದ್ದ ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ನ್ಯಾಯಾಲಯ ವಜಾಗೊಳಿಸಿದೆ. ಕೇಂದ್ರ ಸರ್ಕಾರ ಜಾರಿ ನಿರ್ದೇಶನಾಲಯದ (ED) ಮೇಲೆ ಪ್ರಭಾವ ಬೀರಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿದೆ ಎಂದು ಆರೋಪಿಸಿ, ಕಾಂಗ್ರೆಸ್ ಕಾರ್ಯಕರ್ತರು ಶಿವಮೊಗ್ಗ ಬಿಜೆಪಿ ಕಚೇರಿಗೆ (BJP office) ಮುತ್ತಿಗೆ ಹಾಕಲು ಯತ್ನಿಸಿದರು.
ಜೈಲ್ ಸರ್ಕಲ್‌ನಿಂದ ಮೆರವಣಿಗೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ದೀನದಯಾಳು ರಸ್ತೆಯಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಕೈ ಕಾರ್ಯಕರ್ತರನ್ನು ತಡೆದ ಪೊಲೀಸರು
ಬಿಜೆಪಿ ಕಚೇರಿ ಇರುವ ರಸ್ತೆಯ ಆರಂಭದಲ್ಲೇ ಪೊಲೀಸರು ಬ್ಯಾರಿಕೇಡ್ ಹಾಕಿ ಕಾಂಗ್ರೆಸ್ ಕಾರ್ಯಕರ್ತರನ್ನು ತಡೆದರು. ಈ ಸಂದರ್ಭ ಕಾಂಗ್ರೆಸ್ ಕಾರ್ಯಕರ್ತರು ಬ್ಯಾರಿಕೇಡ್‌ಗಳನ್ನು ತಳ್ಳಿ ನುಗ್ಗಲು ಯತ್ನಿಸಿದರು. ಇದರಿಂದ ಕೆಲವು ಕ್ಷಣ ತಳ್ಳಾಟವಾಯಿತು.

ಬ್ಯಾರಿಕೇಡ್ ಮುಂಭಾಗ ಬಿಜೆಪಿ, ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದರು.
ಕಾಂಗ್ರೆಸ್ ಕಾರ್ಯಕರ್ತರು ವಶಕ್ಕೆ
ಇದೇ ವೇಳೆ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಪ್ರಸನ್ನ ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಕೇಸ್ ದಾಖಲು ಮಾಡಲು ಇ.ಡಿ ಮೇಲೆ ಕೇಂದ್ರ ಸರ್ಕಾರ ಪ್ರಭಾವ ಬೀರಿದೆ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಿಂದ (ನರೇಗಾ) ಮಹಾತ್ಮಗಾಂಧಿ ಅವರ ಹೆಸರು ಕೈಬಿಟ್ಟಿರುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ » ಬಿಹಾರ ಮುಖ್ಯಮಂತ್ರಿ ವಿರುದ್ಧ ಶಿವಮೊಗ್ಗದಲ್ಲಿದಲ್ಲಿ ಅಲ್ಪಸಂಖ್ಯಾತರ ಆಕ್ರೋಶ, ಕಾರಣವೇನು?
ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಬಿಜೆಪಿ ಕಚೇರಿ ಸುತ್ತಲು ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಬಿಜೆಪಿ ಕಚೇರಿ ಸಂಪರ್ಕಿಸುವ ರಸ್ತೆಯ ಮೂರು ಕಡೆ ಬ್ಯಾರಿಕೇಡ್‌ಗಳನ್ನು ಅಳವಡಿಸಿ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು. ಕೆಎಸ್‌ಆರ್‌ಪಿ, ಡಿ.ಎ.ಆರ್ ಮತ್ತು ಸ್ಥಳೀಯ ಪೊಲೀಸರನ್ನು ಬಂದೋಬಸ್ತ್‌ಗೆ ನಿಯೋಜಿಸಲಾಗಿತ್ತು.



LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





