ಬೊಲೇರೋ ವಾಹನ ಪಲ್ಟಿ, ಮಹಿಳೆ ಸಾವು, ಎಲ್ಲಿ? ಹೇಗಾಯ್ತು ಘಟನೆ?

ಭದ್ರಾವತಿ: ಚಾಲಕನ ನಿಯಂತ್ರಣ ತಪ್ಪಿ ಬೊಲೇರೋ ವಾಹನ ಪಲ್ಟಿಯಾಗಿದ್ದು (Bolero accident) ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಭದ್ರಾವತಿಯ ದೊಡ್ಡೇರಿ ಸಮೀಪದ ನೆಟ್ಟಗಲಟ್ಟಿ ಗ್ರಾಮದ ಲಕ್ಷ್ಮಮ್ಮ (48) ಮೃತರು.➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಕೆಲಸ ಮುಗಿಸಿ ಹೋಗುತ್ತಿದ್ದರು

ಗಾಜನೂರು ಸಮೀಪದ ನರ್ಸರಿಯಲ್ಲಿ ಕೆಲಸ ಮುಗಿಸಿ ಬೊಲೇರೋ ವಾಹನದಲ್ಲಿ ಮನೆಗೆ ಮರಳುತ್ತಿದ್ದರು. ಭದ್ರಾವತಿಯ ಬಿಸಿಲುಮನೆ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬೊಲೇರೋ ಪಲ್ಟಿಯಾಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಲಕ್ಷ್ಮಮ್ಮ ಸ್ಥಳದಲ್ಲೆ ಸಾವನ್ನಪ್ಪಿದಾರೆ.

ಇದನ್ನೂ ಓದಿ » ಕುಟುಂಬದವರೆಲ್ಲ ಮಲಗಿದ್ದಾಗಲೇ ಮನೆಯಲ್ಲಿ ಕಳ್ಳತನ, ಲಕ್ಷ ಲಕ್ಷದ ಚಿನ್ನಾಭರಣ, ಹಣ ನಾಪತ್ತೆ, ಹೇಗಾಯ್ತು ಘಟನೆ?

ವಾಹನದಲ್ಲಿ ಇದ್ದವರಿಗೆಲ್ಲ ಗಾಯ

Bolero-Incident-at-Bhadravathi-Bisilumane.

ಬೊಲೇರೋ ವಾಹನದಲ್ಲಿ 14 ಮಂದಿ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ವಾಹನದಲಿದ್ದ ಎಲ್ಲರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಲಕ್ಷ್ಮಮ್ಮ ಅವರ ಮೃತದೇಹವನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದ ರಭಸಕ್ಕೆ ಬೊಲೇರೋ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಭದ್ರಾವತಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Leave a Comment