ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸೊರಬ: ಚಾಲಕನ ನಿಯಂತ್ರಣ ತಪ್ಪಿದ ಕಾರು (car plunge) ಕೆರೆಗೆ ಉರುಳಿದ್ದು ಓರ್ವ ಸಾವನ್ನಪ್ಪಿದ್ದು, ಮತ್ತೊಬ್ಬ ನಾಪತ್ತೆಯಾಗಿದ್ದಾರೆ. ಅದೃಷ್ಟವಶಾತ್ ಇಬ್ಬರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಸೊರಬ ತಾಲೂಕು ಆನವಟ್ಟಿ ಸಮೀಪದ ಕನೆಕೊಪ್ಪ ಹೊಸೂರು ತಿರುವಿನಲ್ಲಿ ಇಂದು ಬೆಳಗಿನ ಜಾವ ಘಟನೆ ಸಂಭವಿಸಿದೆ.
ಪುನೇದಹಳ್ಳಿಯ ನವೀನ್ ಮೃತಪಟ್ಟಿದ್ದಾರೆ. ರಾಮಚಂದ್ರ ಎಂಬುವವರು ನಾಪತೆಯಾಗಿದ್ದಾರೆ. ಅವರಿಗಾಗಿ ಕೆರೆಯಲ್ಲಿ ಶೋಧ ಕಾರ್ಯ ನಡೆಯುತ್ತಿದೆ.
ಹೇಗಾಯ್ತು ಘಟನೆ?
ಇವತ್ತು ಬೆಳಗಿನ ಜಾವ ನವೀನ್, ರಾಮಚಂದ್ರ, ರುದ್ರೇಶ್ ಮತ್ತು ಮಂಜುನಾಥ್ ಎಂಬುವವರು ಶಿಕಾರಿಪುರದಿಂದ ಆನವಟ್ಟಿಗೆ ತೆರಳುತ್ತಿದ್ದರು. ಇವರು ಪ್ರಯಾಣಿಸುತ್ತಿದ್ದ ಈಕೋ ಕಾರು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಹಾರಿದೆ. ಘಟನೆಯಲ್ಲಿ ನವೀನ್ ಮೃತಪಟ್ಟಿದ್ದಾರೆ. ರಾಮಚಂದ್ರ ಕಣ್ಮರೆಯಾಗಿದ್ದಾರೆ. ರುದ್ರೇಶ್ ಮತ್ತು ಮಂಜುನಾಥ್ ಪಾರಾಗಿದ್ದಾರೆ.

ಇದನ್ನೂ ಓದಿ » ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಯುವಕ ಸಾವು, ಮತ್ತೊಬ್ಬನಿಗೆ ಗಂಭೀರ ಪೆಟ್ಟು
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು, ಸ್ಥಳೀಯರು ಸ್ಥಳಕ್ಕೆ ದೌಡಾಯಿಸಿದರು. ಆನವಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು





