ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜನವರಿ 5ರಿಂದ 10 ದಿನ ನಿರುದ್ಯೋಗಿ ಪುರುಷರು ಮತ್ತು ಮಹಿಳೆಯರಿಗೆ ಉಚಿತ ಅಣಬೆ ಬೇಸಾಯ (Mushroom Farming) ತರಬೇತಿ ಶಿಬಿರ ಏರ್ಪಡಿಸಲಾಗಿದೆ.
ಇದನ್ನೂ ಓದಿ » ಶಿವಮೊಗ್ಗ ಹಾಲು ಒಕ್ಕೂಟಕ್ಕೆ ಲೋಕಾಯುಕ್ತ ತಂಡ ದಿಢೀರ್ ಭೇಟಿ, ಪರಿಶೀಲನೆ
ಸ್ವಯಂ ಉದ್ಯೋಗಿಗಳಾಗ ಬಯಸುವ 18 ರಿಂದ 50 ವರ್ಷದೊಳಗಿನವರು ಭಾಗವಹಿಸಬಹುದು. ತರಬೇತಿ, ಊಟ ಹಾಗೂ ವಸತಿ ಉಚಿತವಾಗಿರುತ್ತದೆ. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ಆಸಕ್ತರು ಡಿ.30ರಂದು ಬೆಳಗ್ಗೆ 10ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಇಲ್ಲಿಗೆ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು.
ಸಂದರ್ಶನಕ್ಕೆ ಬರಲು ಸಾಧ್ಯವಾಗದವರು ಡಿ.30ರೊಳಗೆ ಸಂಸ್ಥೆಯ 89704 76050, 95915 14154 ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






