ಅಡಿಕೆ ಎಲೆ ಚುಕ್ಕೆ ರೋಗ, ಶಿವಮೊಗ್ಗದಲ್ಲಿ ಮಿನಿಸ್ಟರ್‌ ನೇತೃತ್ವದಲ್ಲಿ ಮಹತ್ವದ ಸಭೆ, ಏನೆಲ್ಲ ಚರ್ಚೆಯಾಯ್ತು?

 ಶಿವಮೊಗ್ಗ  LIVE 

ಶಿವಮೊಗ್ಗ: ಅಡಿಕೆ ಎಲೆಚುಕ್ಕೆ ರೋಗದಿಂದ (Spot disease) ಮಲೆನಾಡಿನ ಸಣ್ಣ ರೈತರಿಗೆ ತೊಂದರೆಯಾಗುತ್ತಿದೆ. ರಾಜ್ಯ ಸರ್ಕಾರ ವಿಜ್ಞಾನಿಗಳಿಂದ ಮಾರ್ಗದರ್ಶನ ಪಡೆದು ಹತೋಟಿ ಕ್ರಮ ಕೈಗೊಳ್ಳುತ್ತಿದೆ. ರೈತರಿಗೆ ಈ ಬಗ್ಗೆ ಹೆಚ್ಚಿನ ತಿಳುವಳಿಕೆ ನೀಡುವುದು ಅತಿ ಅವಶ್ಯಕವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.‌

ಇದನ್ನೂ ಓದಿ » ‘ಸರ್ಕಾರಿ ನೌಕರರ ಸಂಘ ಇದೇ ಮೊದಲು ಬೃಹತ್‌ ಯೋಜನೆಗೆ ಕೈ ಹಾಕಿದೆ, ದೇಶದಲ್ಲೇ ವಿನೂತನ ಪ್ರಯತ್ನʼ

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎಲೆ ಚುಕ್ಕೆ ರೋಗ ನಿಯಂತ್ರಣ ಮತ್ತು ಇತರೆ ವಿಷಯ ಕುರಿತು ಚರ್ಚಿಸಲು ವಿಜ್ಞಾನಿಗಳು ಮತ್ತು ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಮಳೆಗಾಲದಲ್ಲಿ ಎಲೆ ಚುಕ್ಕೆ ರೋಗ ನಿಯಂತ್ರಣ ದುಬಾರಿಯಾಗಿದೆ. ರೋಗ ನಿಯಂತ್ರಣ ಕ್ರಮಕ್ಕೆ ಕೇಂದ್ರ ಮತ್ತು ರಾಜ್ಯ ಕ್ರಮವಾಗಿ ಶೇ.60 ಮತ್ತು 40ರಷ್ಟು ಹಣ ನೀಡಲು ಸಿದ್ದವಿದೆ. ಮುಖ್ಯವಾಗಿ ರೋಗ ನಿಯಂತ್ರಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ವಿಜ್ಞಾನಿಗಳ ಅಭಿಪ್ರಾಯ ಮತ್ತು ಮಾರ್ಗದರ್ಶನದ ಮೇಲೆ ಮಾರ್ಗಸೂಚಿಯನ್ನು ತಯಾರಿಸಲಾಗುತ್ತಿದೆ ಎಂದು ತಿಳಿಸಿದರು.

Madhu-Bangarappa-Meeting-with-officials-at-DC-Office.

ಸಣ್ಣ ರೈತರಿಗೆ ತುಂಬಾ ತೊಂದರೆ

ಇಲಾಖೆಗಳು, ಗ್ರಾ.ಪಂ, ಸಹಕಾರ ಸಂಘಗಳು, ಅಡಿಕೆ ಮಾರಾಟ ಸಹಕಾರ ಸಂಘಗಳ ಮೂಲಕ ರೈತರಿಗೆ ಈ ರೋಗ ನಿಯಂತ್ರಣ ಮತ್ತು ವಿಜ್ಞಾನಿಗಳು ತಯಾರಿಸಿದ ಮಾರ್ಗಸೂಚಿಗಳನ್ನು ಅನುಸರಿಸುವ ಕುರಿತು ಹೆಚ್ಚಿನ ಜಾಗೃತಿ ಮೂಡಿಸಬೇಕಿದೆ. ಅರ್ಧ, ಮುಕ್ಕಾಲು ಎಕರೆ ಹೊಂದಿರುವ ಸಣ್ಣ ಸಣ್ಣ ರೈತರಿಗೆ ಈ ರೋಗದಿಂದಾಗಿ ತುಂಬಾ ತೊಂದರೆಯಾಗುತ್ತಿದ್ದು ರೋಗ ನಿಯಂತ್ರಣಕ್ಕಾಗಿ ಎಲ್ಲರೂ ಸೇರಿ ತಂಡವಾಗಿ ಕಾರ್ಯ ನಿರ್ವಹಿಸುವ ಮೂಲಕ ಸಹಕರಿಸಬೇಕು ಎಂದರು.

ಅತಿ ಹೆಚ್ಚು ಕೆಪಿಎಸ್ ಶಾಲೆ

ರಾಜ್ಯದಲ್ಲಿ 900 ಕೆಪಿಎಸ್ ಶಾಲೆಗಳನ್ನು ತೆರೆಯಲಾಗುತ್ತಿದೆ. ಜಿಲ್ಲೆಯಲ್ಲಿ ಈಗಾಗಲೇ 11 ಕೆಪಿಎಸ್ ಶಾಲೆಗಳಿವೆ. ಹೊಸದಾಗಿ 19 ಕೆಪಿಎಸ್ ಶಾಲೆಗಳನ್ನು ಮಂಜೂರು ಮಾಡಲಾಗಿದೆ. ಕೆಪಿಎಸ್‌ ಶಾಲೆಗಳಿಗೆ ಶಿವಮೊಗ್ಗದಲ್ಲಿಯೇ ಮುಖ್ಯಮಂತ್ರಿಯಿಂದ ಚಾಲನೆ ಕೊಡಿಸುವ ಯೋಜನೆ ಇದೆ ಎಂದರು.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment