ಶಿವಮೊಗ್ಗದ ಅಧಿಕಾರಿಗಳಿಗೆ 15 ದಿನದ ಗಡುವು ನೀಡಿದ ಮಿನಿಸ್ಟರ್‌, ಕಾರಣವೇನು?

 ಶಿವಮೊಗ್ಗ  LIVE 

ಶಿವಮೊಗ್ಗ: ಜಿಲ್ಲೆಯಲ್ಲಿರುವ ಎಲ್ಲ ಕೊಳಚೆ ಪ್ರದೇಶಗಳನ್ನು (slum free) ಗುರುತಿಸಿ ಅಲ್ಲಿಯ ನಿವಾಸಿಗಳಿಗೆ ಹಕ್ಕುಪತ್ರ ನೀಡಿ ಮುಖ್ಯವಾಹಿನಿಗೆ ತರಲು ಆಂದೋಲನದ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಸಚಿವ ಮಧು ಬಂಗಾರಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಮಧು ಬಂಗಾರಪ್ಪ, ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಕೊಳಚೆ ಪ್ರದೇಶಗಳನ್ನು ಗುರುತಿಸಿ ನಿವಾಸಿಗಳಿಗೆ ಹಕ್ಕುಪತ್ರ, ಇ-ಸ್ವತ್ತು ನೀಡಲು ಕ್ರಮ ಜರುಗಿಸಬೇಕು ಎಂದು ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

15 ದಿನಗಳ ಒಳಗೆ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸ್ಲಂ ಗಳನ್ನು ಗುರುತಿಸಿ ಕ್ರಮ ವಹಿಸಬೇಕು. ಜಿಲ್ಲೆಯನ್ನು ಕೊಳಚೆ ಪ್ರದೇಶ ಮುಕ್ತ ಜಿಲ್ಲೆಯನ್ನಾಗಿ ಮಾಡಬೇಕು.ಮಧು ಬಂಗಾರಪ್ಪ, ಸಚಿವ

Madhu-Bangarappa-meeting-at-Shimoga-DC-office.

ವಿಧಾನ ಪರಿಷತ್ ಸದಸ್ಯೆ ಬಲ್ಕಿಸ್ ಬಾನು, ಜಿಲ್ಲಾ ಪಂಚಾಯಿತಿ ಸಿಇಓ ಹೇಮಂತ್ ಎನ್, ಸಿಸಿಎಫ್ ಹನುಮಂತಪ್ಪ, ಅಪರ ಜಿಲ್ಲಾಧಿಕಾರಿ ಅಭಿಷೇಕ್.ವಿ, ವಿಧಾನ ಪರಿಷತ್ ಮಾಜಿ ಸದಸ್ಯ ಪ್ರಸನ್ನಕುಮಾರ್, ಕೃಷಿ ಮಹಾವಿದ್ಯಾಲಯದ ಆಡಳಿತ ಮಂಡಳಿ ಸದಸ್ಯ ದೇವಿಕುಮಾರ್, ಎಸಿ ಸತ್ಯನಾರಾಯಣ, ಡಿಯುಡಿಸಿ ಅಧಿಕಾರಿಗಳು, ಅರಣ್ಯ ಇಲಾಖೆ ಅಧಿಕಾರಿಗಳು, ಸ್ಲಂ ಬೋರ್ಡ್ ಅಧಿಕಾರಿಗಳು, ಡಿಡಿಪಿಐ, ಇತರೆ ಇಲಾಖೆ ಅಧಿಕಾರಿಗಳು ಹಾಜರಿದ್ದರು.

Madhu-Bangarappa-Meeting-with-officials-at-DC-Office.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment