ಶಿವಮೊಗ್ಗ LIVE
ಚಿತ್ರದುರ್ಗ: ಕಂಟೇನರ್ ಲಾರಿ ಡಿಕ್ಕಿ ಹೊಡೆದು ಸೀಬರ್ಡ್ ಕಂಪನಿಯ ಬಸ್ (bus accident) ಹೊತ್ತಿ ಉರಿದಿದೆ. ಬಸ್ಸು ಬೆಂಗಳೂರಿನಿಂದ ಶಿವಮೊಗ್ಗ ಮಾರ್ಗವಾಗಿ ಗೋಕರ್ಣಕ್ಕೆ ತೆರಳುತ್ತಿತ್ತು. ಘಟನೆಯಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಗೊರ್ಲತ್ತು ಗ್ರಾಮದ ಬಳಿ ಘಟನೆ ಸಂಭವಿಸಿದೆ. ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಂಟೇನರ್ ಲಾರಿ ಡಿವೈಡರ್ ಹಾರಿ ಬಂದು ಬಸ್ಸಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.
ಇಬ್ಬರು ಶಿವಮೊಗ್ಗದ ಪ್ರಯಾಣಿಕರು
ರಾತ್ರಿ 8.30ಕ್ಕೆ ಬೆಂಗಳೂರಿನಿಂದ ಬಸ್ ಹೊರಟಿತ್ತು. ರಾತ್ರಿ 2 ಗಂಟೆ ಹೊತ್ತಿಗೆ ಘಟನೆ ಸಂಭವಿಸಿದೆ. ಬಸ್ಸಿನಲ್ಲಿ 36 ಸೀಟುಗಳಿದ್ದವು. 32 ಪ್ರಯಾಣಿಕರು ಟಿಕೆಟ್ ಬುಕ್ ಮಾಡಿಕೊಂಡಿದ್ದರು. ಈ ಪೈಕಿ 25 ಪ್ರಯಾಣಿಕರು ಗೋಕರ್ಣಕ್ಕೆ ತೆರಳುತ್ತಿದ್ದರು. ಕುಮಟಾಗೆ ಇಬ್ಬರು, ಶಿವಮೊಗ್ಗಕ್ಕೆ ಇಬ್ಬರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಐಜಿಪಿ ಭೇಟಿ, ಏನಂದ್ರು?
ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಐಜಿಪಿ ರವಿಕಾಂತೇಗೌಡ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು.
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಐಜಿಪಿ ರವಿಕಾಂತೇಗೌಡ, ಲಾರಿಯು ಬಸ್ಸಿನ ಡಿಸೇಲ್ ಟ್ಯಾಂಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದ ಬಂದಿದೆ. ಈವರೆಗೆ ನಮಗೆ 9 ಮಂದಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಇದೆ. ಎಂಟು ಮಂದಿ ಬಸ್ಸಿನಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ. ಕಂಟೇನರ್ ಲಾರಿಯ ಚಾಲಕ ಕೂಡ ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಗಾಯಾಳುಗಳ ಪೈಕಿ 12 ಮಂದಿ ಹಿರಿಯೂರು, 9 ಮಂದಿ ಶಿರಾ, ಮೂವರು ತುಮಕೂರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ » ಶಿವಮೊಗ್ಗದ ಅಧಿಕಾರಿಗಳಿಗೆ 15 ದಿನದ ಗಡುವು ನೀಡಿದ ಮಿನಿಸ್ಟರ್, ಕಾರಣವೇನು?
ಒಬ್ಬ ಪ್ರಯಾಣಿಕರಿಗೆ ಗಂಭೀರವಾಗಿ ಸುಟ್ಟ ಗಾಯವಾಗಿದೆ. ಆದ್ದರಿಂದ ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲು ಸಿದ್ದತೆಯಾಗುತ್ತಿದೆ. ಉಳಿದೆಲ್ಲ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಚಾಲಕ, ನಿರ್ವಾಹಕ ಸೇರಿ ಬಸ್ಸಿನಲ್ಲಿ ಒಟ್ಟು 32 ಮಂದಿ ಇದ್ದರು. ಅದರಲ್ಲಿ ಒಂದು ಮಗು ಸೇರಿ ಎಂಟು ಮಂದಿ ಸಾವನ್ನಪ್ಪಿರಬಹುದು ಎಂದು ಈತನಕ ಮಾಹಿತಿ ಇದೆ. ಮೃತದೇಹಗಳನ್ನು ಪರಿಶೀಲಿಸಿ, ಮರಣೋತ್ತರ ಪರೀಕ್ಷೆ ನಡೆಸಿ ಡಿಎನ್‌ಎ ಪರೀಕ್ಷೆಗೆ ಸಾಕ್ಷಿ ಸಂಗ್ರಹಿಸಲಾಗುತ್ತದೆ. ಬೆಂಗಳೂರಿನಿಂದಲು ತಜ್ಞರ ತಂಡ ಆಗಮಿಸಿದೆ ಎಂದರು.
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






