BREAKING NEWS – ಶಿವಮೊಗ್ಗದಲ್ಲಿ ಚಾಕು ಇರಿತ, ವ್ಯಕ್ತಿಗೆ ಗಂಭೀರ ಗಾಯ, ಎಲ್ಲಿ? ಹೇಗಾಯ್ತು ಘಟನೆ?

 ಶಿವಮೊಗ್ಗ  LIVE 

ಹೈಲೈಟ್ಸ್‌

  • ಮಲವಗೊಪ್ಪ ಪೆಟ್ರೋಲ್ ಬಂಕ್ ಬಳಿ ನಡೆದ ಚಾಕು ಇರಿತ.
  • ಗಾಯಾಳು ವಿನೋದ್ ಮೆಗ್ಗಾನ್ ಆಸ್ಪತ್ರೆಗೆ ದಾಖಲು.
  • ಆರೋಪಿ ವಿಕ್ರಂ ಪತ್ತೆಗೆ ಪೊಲೀಸ್ ಶೋಧ ಚುರುಕು.

ಶಿವಮೊಗ್ಗ: ಮಲವಗೊಪ್ಪದ ಪೆಟ್ರೋಲ್ ಬಂಕ್ ಎದುರು ನಿನ್ನೆ ರಾತ್ರಿ ಇಬ್ಬರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ವ್ಯಕ್ತಿಯೊಬ್ಬರಿಗೆ ಚಾಕು (Stabbed) ಇರಿಯಲಾಗಿದೆ. ಮಿಳ್ಳಘಟ್ಟ ನಿವಾಸಿ ವಿನೋದ್ (35) ಚಾಕು ಇರಿತಕ್ಕೊಳಗಾದವರು. ಆರೋಪಿ ವಿಕ್ರಂ (42) ಎಂಬಾತ ವಿನೋದ್ ಅವರ ಮೇಲೆ ಚಾಕುವಿನಿಂದ ಮನಸೋಇಚ್ಛೆ ದಾಳಿ ನಡೆಸಿದ್ದಾನೆ.

301123-Shimoga-Rural-Police-Station.webp

ದಾಳಿಯ ರಭಸಕ್ಕೆ ವಿನೋದ್ ಅವರ ಮುಖ, ಕೈ ಹಾಗೂ ಮೈಮೇಲೆ ತೀವ್ರ ಗಾಯಗಳಾಗಿವೆ. ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಕೂಡಲೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.  

ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿ ವಿಕ್ರಂ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ. ವೈಯಕ್ತಿಕ ಕಾರಣಕ್ಕೆ ಜಗಳವಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ನಿಖರ ಕಾರಣ ಇನ್ನಷ್ಟೆ ತಿಳಿದು ಬರಬೇಕಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಅಡುಗೆ ಅನಿಲ ಸಿಲಿಂಡರ್‌ ಸ್ಪೋಟ, ಎಲ್ಲಿ? ಏನೇನು ಹಾನಿಯಾಗಿದೆ?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment