ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ: ಕಾರು ಮತ್ತು ಬಸ್ ಮುಖಾಮುಖಿ ಡಿಕ್ಕಿಯಾಗಿದ್ದು (collision) ದಂಪತಿ ಗಾಯಗೊಂಡಿದ್ದಾರೆ. ಸಾಗರ ತಾಲೂಕು ಕಾಸ್ಪಾಡಿಯಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ.
ಸಿದ್ದೇಶ್ವರ ಮತ್ತು ಅವರ ಪತ್ನಿ ತಲೆಗೆ ಗಂಭೀರ ಪೆಟ್ಟಾಗಿದೆ. ಅವರನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರಿನಲ್ಲಿದ್ದ ಇಬ್ಬರು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.
ಹೇಗಾಯ್ತು ಘಟನೆ?
ಬಸ್ಸು ಮಣಿಪಾಲದಿಂದ ಸಾಗರಕ್ಕೆ ತೆರಳುತ್ತಿತ್ತು. ಕಾರು ಸಾಗರದ ಕಡೆಯಿಂದ ದಾವಣಗೆರೆಗೆ ತೆರಳುತ್ತಿತ್ತು. ಕಾಸ್ಪಾಡಿ ಬಳಿ ಎರಡು ವಾಹನಗಳು ಮುಖಾಮುಖಿ ಡಿಕ್ಕಿಯಾಗಿವೆ. ಘಟನೆಯಲ್ಲಿ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಬಸ್ಸಿನ ಒಂದು ಬದಿಗೆ ಹಾನಿಯಾಗಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಚಾಕು ಇರಿತ, ವ್ಯಕ್ತಿಗೆ ಗಂಭೀರ ಗಾಯ, ಎಲ್ಲಿ? ಹೇಗಾಯ್ತು ಘಟನೆ?
ದಾರಿಯಲ್ಲಿ ತೆರಳುತ್ತಿದ್ದವರು ಮತ್ತು ಸ್ಥಳೀಯರು ಕಾರಿನಲ್ಲಿದ್ದವರನ್ನು ರಕ್ಷಿಸಿ ಮೂಲಕ ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಬಸ್ಸಿನಲ್ಲಿ ಕಡಿಮೆ ಸಂಖ್ಯೆ ಪ್ರಯಾಣಿಕರು ಇದ್ದರು. ಯಾರಿಗು ಯಾವುದೇ ಸಮಸ್ಯೆ ಆಗಿಲ್ಲ ಎಂದು ತಿಳಿದು ಬಂದಿದೆ.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





