ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIKARIPURA | 30 ಸೆಪ್ಟೆಂಬರ್ 2019

ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ರೈಲ್ವೆ ಮಾರ್ಗದ ಭೂಸ್ವಾಧೀನಕ್ಕೆ ಶಿಕಾರಿಪುರದಲ್ಲಿ ಕಚೇರಿ ತೆರೆಯಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇವತ್ತು ಕಚೇರಿ ಉದ್ಘಾಟನೆ ಮಾಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ರೈಲ್ವೆ ಮಾರ್ಗ ನಿರ್ಮಾಣಕ್ಕೆ ರಾಜ್ಯದ ಪಾಲು 750 ಕೋಟಿ ರೂ. ಬಿಡುಗಡೆ ಮಾಡುವುದಾಗಿ ಘೋಷಿಸಿದರು.
ಕಲ್ಲೊಡ್ಡು, ಮೂಡಿಗೆ ಜಾರಿಗೆ ಬರಲಿವೆ
ರಾಜ್ಯದಲ್ಲಿ ನೀರಿನ ಸಮಸ್ಯೆಯನ್ನು ನೀಗಿಸಲು ವಿವಿಧ ನೀರಾವರಿ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ನೀರಾವರಿ ಇಲಾಖೆ ತಮ್ಮ ಕೈಯಲ್ಲೆ ಇದೆ. ರಾಜ್ಯದ ಎಲ್ಲ ನೀರಾವರಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ ಎಂದರು.

ಶಿಕಾರಿಪುರ ಮತ್ತು ಸೊರಬ ತಾಲೂಕಿಗೆ ನೀರಾವರಿ ಕಲ್ಪಿಸಲು ಕಲ್ಲೊಡ್ಡು ಮತ್ತು ಮೂಡಿ ಯೋಜನೆಗಳನ್ನು ಕೈಗೊಳ್ಳಲಾಗಿದೆ. ಇದಕ್ಕಾಗಿ ಈಗಾಗಲೆ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.
ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಹಲವು ಪ್ರಮುಖರು ಈ ವೇಳೆ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು





