ಮೆಕಾನಿಕಲ್‌ ಇಂಜಿನಿಯರ್‌ ಇನ್ಮುಂದೆ ಶಿವಮೊಗ್ಗ ಪೊಲೀಸ್‌ ಇಲಾಖೆಯ ‘ಮೈಕ್‌ ಒನ್‌ʼ

 ಶಿವಮೊಗ್ಗ  LIVE 

ಶಿವಮೊಗ್ಗ: ಜಿಲ್ಲೆಯ ನೂತನ ರಕ್ಷಣಾಧಿಕಾರಿಯಾಗಿ ನಿಖಿಲ್‌.ಬಿ (Nikhil IPS) ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ. ಸದ್ಯ ಕೋಲಾರ ಜಿಲ್ಲೆಯ ರಕ್ಷಣಾಧಿಕಾರಿಯಾಗಿರುವ ನಿಖಿಲ್‌ ಅವರು ನೂತನ ವರ್ಷದ ಮೊದಲ ದಿನದಿಂದಲೇ ಶಿವಮೊಗ್ಗದಲ್ಲಿ ಜವಾಬ್ದಾರಿ ವಹಿಸಿಕೊಳ್ಳುವ ಸಾಧ್ಯತೆ ಇದೆ.

Nikhil IPS, shivamogga new SP

ಯಾರು ನಿಖಿಲ್‌? ಇಲ್ಲಿದೆ ಅವರ ಕುರಿತ ಪ್ರಮುಖಾಂಶ

POINT-1ಐಪಿಎಸ್‌ ಅಧಿಕಾರಿ ನಿಖಿಲ್‌.ಬಿ ಅವರು ಮೂಲತಃ ಚಿತ್ರದುರ್ಗ ಜಿಲ್ಲೆಯವರು. ಬೆಳೆದಿದ್ದೆಲ್ಲ ಬೆಂಗಳೂರಿನಲ್ಲಿ. ಮೆಕಾನಿಕಲ್‌ ಇಂಜಿನಿಯರಿಂಗ್‌ ಪದವಿ ಹೊಂದಿದ್ದಾರೆ.

POINT-22017ರ ಬ್ಯಾಚ್‌ನ ಐಪಿಎಸ್‌ ಅಧಿಕಾರಿ. ರಾಯಚೂರಿನಲ್ಲಿ ಪ್ರೊಬೇಷನರಿ ಅವಧಿ ಪೂರ್ಣಗೊಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಎಎಸ್‌ಪಿಯಾಗಿ ಸೇವೆ ಸಲ್ಲಿಸಿದ್ದರು. ನಕ್ಸಲ್‌ ನಿಗ್ರಹ ಪಡೆ (ಎಎನ್‌ಎಫ್‌) ಮತ್ತು ಕರಾವಳಿ ಭದ್ರಾತಾ ಪಡೆಯಲ್ಲಿ ಜವಾಬ್ದಾರಿ ನಿಭಾಯಿಸಿದ್ದರು.

POINT-3ಎರಡು ವರ್ಷ ಎಂಟು ತಿಂಗಳು ರಾಯೂಚೂರು ಜಿಲ್ಲಾ ರಕ್ಷಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಒಂದೂವರೆ ವರ್ಷದಿಂದ ಕೋಲಾರ ಜಿಲ್ಲಾ ರಕ್ಷಣಾಧಿಕಾರಿಯಾಗಿ ಜವಾಬ್ದಾರಿ ನಿಭಾಯಿಸುತ್ತಿದ್ದರು.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment