ಹೊಸ ವರ್ಷದ ಪಾರ್ಟಿ ವೇಳೆ ಕೈ ಕೈ ಮಿಲಾಯಿಸಿದ ಯುವಕರು, ಚೇರ್‌ಗಳಿಂದಲೇ ಬಡಿದಾಟ

 ಶಿವಮೊಗ್ಗ  LIVE 

ಶಿವಮೊಗ್ಗ: ನಗರದಲ್ಲಿ ಹೊಸ ವರ್ಷಾಚರಣೆಯ ಸಂಭ್ರಮಾಚರಣೆಯ ಅಂತಿಮ ಹಂತದಲ್ಲಿ ಯುವಕರ ಎರಡು ಗುಂಪುಗಳ (Youth Clash) ಮಧ್ಯೆ ಗಲಾಟೆಯಾಗಿದೆ. ಪಾರ್ಟಿಯಲ್ಲಿ ಹಾಕಿದ್ದ ಚೇರ್‌ಗಳಿಂದಲೇ ಹೊಡೆದಾಡಿಕೊಂಡಿದ್ದಾರೆ.

Altercation-in-New-Year-party-in-Shimoga

ಶಿವಮೊಗ್ಗದ ಸಾಗರ ರಸ್ತೆಯ ಅಡಿಕೆ ಮಂಡಿ ಮರ್ಚೆಂಟ್ಸ್‌ ಕ್ಲಬ್‌ನಲ್ಲಿ ನಡೆದ ಪಾರ್ಟಿ ವೇಳೆ ಘಟನೆಯಾಗಿದೆ. ಕ್ಷುಲ್ಲಕ ಕಾರಣಕ್ಕೆ ಎರಡು ತಂಡಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಅದು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತು. ಗಲಾಟೆ ವಿಕೋಪಕ್ಕೆ ತಿರುಗಿದಾಗ ಎರಡು ಗುಂಪಿನವರು ಪರಸ್ಪರ ಚೇರ್‌ಗಳಿಂದಲೇ ಹೊಡೆದಾಡಿಕೊಂಡಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆಯೇ ತುಂಗಾನಗರ ಠಾಣೆ ಇನ್ಸ್‌ಪೆಕ್ಟರ್‌ ಕೆ.ಟಿ.ಗುರುರಾಜ್‌ ಮತ್ತು ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದರು. ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎ.ಜಿ.ಕಾರಿಯಪ್ಪ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಹೊಸ ವರ್ಷಕ್ಕೆ ಸಂಭ್ರಮದ ಸ್ವಾಗತ, ಎಲ್ಲೆಲ್ಲಿ ಹೇಗಿತ್ತು?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment