ಶಿವಮೊಗ್ಗ LIVE
ಶಿವಮೊಗ್ಗ: ಹೊಸ ವರ್ಷದ ಹಿನ್ನೆಲೆ ಶಿವಮೊಗ್ಗದ ದೇಗುಲಗಳಲ್ಲಿ ಇವತ್ತು ಭಕ್ತರ ಸಂಖ್ಯೆ ಹೆಚ್ಚಾಗಿತ್ತು. ಇಡೀ ವರ್ಷ ಸುಭಿಕ್ಷವಾಗಿರಲಿ ಎಂದು ಭಕ್ತರು (devotees) ಪ್ರಾರ್ಥನೆ ಮಾಡಿ, ಪೂಜೆ ಸಲ್ಲಿಸಿದರು.
ಎಲ್ಲೆಲ್ಲಿ ಹೇಗಿತ್ತು ಪರಿಸ್ಥಿತಿ?
ರಾಘವೇಂದ್ರ ಸ್ವಾಮಿ ಮಠ

ದುರ್ಗಿಗುಡಿಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ಸನ್ನಿಧಿಗೆ ಇವತ್ತು ಸಾವಿರಾರು ಭಕ್ತರು ಭೇಟಿ ನೀಡಿದ್ದರು. ವರ್ಷದ ಮೊದಲ ದಿನ ಮತ್ತು ಗುರುವಾರವಾದ್ದರಿಂದ ಬೆಳಗ್ಗೆಯಿಂದಲೇ ಭಕ್ತರು ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.
ರಾಯರ ಮಠದಲ್ಲಿ ಬೆಳಗ್ಗೆಯಿಂದ ನಿರಂತರ ಪೂಜೆ ನಡೆಯುತ್ತಿದೆ. ಪಂಚಾಮೃತ ಅಭಿಷೇಕ, ಕ್ಷೀರಾಭಿಷೇಕ, ನೂತನ ಮಡಿ ವಸ್ತ್ರ ಸೇವೆ, ಸಂಪೂರ್ಣ ಹೂವಿನ ಅಲಂಕಾರ ಸೇವೆಗಳು ನಡೆದವು. ಸಂಜೆ ಭಕ್ತರ ಸಂಖ್ಯೆ ಎಂದಿಗಿಂತಲು ಹೆಚ್ಚಿತ್ತು. ರಾಯರ ದೇವಸ್ಥಾನದ ಮುಂಭಾಗದ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿತ್ತು.

ಕೋಟೆ ರಸ್ತೆಯ ದೇಗುಲಗಳು
ಕೋಟೆ ರಸ್ತೆಯಲ್ಲಿರುವ ಕೋಟೆ ಶ್ರೀ ಸೀತಾರಾಮಾಂಜನೇಯ ದೇಗುಲ, ಕೋಟೆ ಶ್ರೀ ಭೀಮೇಶ್ವರ ದೇವಸ್ಥಾನ, ಕೋಟೆ ಶ್ರೀ ಮಾರಿಕಾಂಬ ದೇವಸ್ಥಾನಗಳಿಗೆ ಇಂದು ಬೆಳಗ್ಗೆಯಿಂದಲೇ ಭಕ್ತರು ಭೇಟಿ ನೀಡಿ ಪೂಜೆ ಸಲ್ಲಿಸುತ್ತಿದ್ದಾರೆ.

ಕೋಟೆ ಶ್ರೀ ಸೀತಾರಾಮಾಂಜನೇಯ ದೇಗುಲದಲ್ಲಿ ಸೀತಾ ಕಲ್ಯಾಣ ಶತಮಾನೋತ್ಸವದ ಹಿನ್ನೆಲೆ ಇವತ್ತು ಸುದರ್ಶನ ಹೋಮ, ಉರುಟಣೆ ಇತ್ತು. ಹೊಸ ವರ್ಷದ ಹಿನ್ನೆಲೆ ದೇಗುಲಕ್ಕೆ ಭೇಟಿ ನೀಡಿದ ಭಕ್ತರು ಹೋಮದಲ್ಲಿ ಭಾಗವಹಿಸಿ ಪುನೀತರಾದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಈ ಬಾರಿಯು ವೈಭವದ ತೆಪ್ಪೋತ್ಸವ, ಹೇಗಿದೆ ಸಿದ್ಧತೆ? ಏನೆಲ್ಲ ಕಾರ್ಯಕ್ರಮ ಇರಲಿದೆ?
ನಗರದ ಎಲ್ಲ ದೇಗುಲಗಳಲ್ಲಿಯು ಇವತ್ತು ಭಕ್ತರ ಸಂಖ್ಯೆ ಹೆಚ್ಚಿತ್ತು. ಹೊಸ ವರ್ಷ ಸುಖ, ಸಮೃದ್ಧಿ ತರಲಿ ಎಂದು ಭಕ್ತರು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





