ಶಿವಮೊಗ್ಗ LIVE
ಶಿವಮೊಗ್ಗ: ಜಿಲ್ಲೆಯ ನೂತನ ರಕ್ಷಣಾಧಿಕಾರಿಯಾಗಿ ಬಿ.ನಿಖಿಲ್ (Nikhil IPS) ಅಧಿಕಾರ ಸ್ವೀಕರಿಸಿದರು. ಹೆಚ್ಚುವರಿ ರಕ್ಷಣಾಧಿಕಾರಿ ಎ.ಜಿ.ಕಾರಿಯಪ್ಪ ಅವರು ಬಿ.ನಿಖಿಲ್ ಅವರಿಗೆ ಅಧಿಕಾರ ವಹಿಸಿಕೊಟ್ಟರು.
ಸಂಜೆ ಶಿವಮೊಗ್ಗಕ್ಕೆ ಆಗಮನ
ಐಪಿಎಸ್ ಅಧಿಕಾರಿ ಬಿ.ನಿಖಿಲ್ ಅವರು ಇಂದು ಸಂಜೆ ಶಿವಮೊಗ್ಗಕ್ಕೆ ಆಗಮಿಸಿದರು. ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನೂತನ ರಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡರು. ಇದೇ ವೇಳೆ ಹೆಚ್ಚುವರಿ ರಕ್ಷಣಾಧಿಕಾರಿಗಳು, ಡಿವೈಎಸ್‌ಪಿಗಳು, ಇನ್ಸ್‌ಪೆಕ್ಟರ್‌ಗಳ ಪರಿಚಯ ಮಾಡಿಕೊಂಡರು.
ಮೊದಲ ಮಹತ್ವದ ಮೀಟಿಂಗ್
ಅಧಿಕಾರ ವಹಿಸಿಕೊಂಡ ಬಳಿಕ ಜಿಲ್ಲಾ ರಕ್ಷಣಾಧಿಕಾರಿ ಬಿ.ನಿಖಿಲ್ ಅವರು ಡಿವೈಎಸ್‌ಪಿಗಳು, ಇನ್ಸ್‌ಪೆಕ್ಟರ್‌ಗಳ ಜೊತೆಗೆ ಮಹತ್ವದ ಸಭೆ ನಡೆಸಿದರು. ಶಿವಮೊಗ್ಗದಲ್ಲಿನ ಅಪರಾಧ ಪ್ರಕರಣಗಳು, ಕಾನೂನು ಸುವ್ಯವಸ್ಥೆ, ಅಕ್ರಮ ಚಟುವಟಿಕೆಗಳ ನಿಯಂತ್ರಣ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಇದನ್ನೂ ಓದಿ » ಮೆಕಾನಿಕಲ್ ಇಂಜಿನಿಯರ್ ಇನ್ಮುಂದೆ ಶಿವಮೊಗ್ಗ ಪೊಲೀಸ್ ಇಲಾಖೆಯ ‘ಮೈಕ್ ಒನ್ʼ
ಪ್ರಭಾರ ಎಸ್‌ಪಿಯಾಗಿದ್ದ ಎಎಸ್‌ಪಿ
ಶಿವಮೊಗ್ಗ ರಕ್ಷಣಾಧಿಕಾರಿಯಾಗಿದ್ದ ಜಿ.ಕೆ.ಮಿಥುನ್ ಕುಮಾರ್ ಅವರು ಇಂದು ಬೆಂಗಳೂರಿನ ಈಶಾನ್ಯ ವಲಯದ ಡಿಸಿಪಿಯಾಗಿ ಅಧಿಕಾರ ಸ್ವೀಕರಿಸಬೇಕಿತ್ತು. ಹಾಗಾಗಿ ಬೆಂಗಳೂರಿಗೆ ತೆರಳಿದ್ದಾರೆ. ಈ ಹಿನ್ನೆಲೆ ಹೆಚ್ಚುವರಿ ರಕ್ಷಣಾಧಿಕಾರಿ ಎ.ಜಿ.ಕಾರಿಯಪ್ಪ ಅವರಿಗೆ ಮಿಥುನ್ ಕುಮಾರ್ ಅವರು ಅಧಿಕಾರ ಹಸ್ತಾಂತರ ಮಾಡಿದ್ದರು. ಎಎಸ್‌ಪಿ ಕಾರಿಯಪ್ಪ ಅವರು ಪ್ರಭಾರ ಎಸ್‌ಪಿಯಾಗಿ ಇಂದು ಜವಾಬ್ದಾರಿ ನಿಭಾಯಿಸಿದ್ದರು. ಹಾಗಾಗಿ ಎಎಸ್‌ಪಿ ಕಾರಿಯಪ್ಪ ಅವರು ನಿಖಿಲ್ ಅವರಿಗೆ ಅಧಿಕಾರ ಹಾಸ್ತಾಂತರ ಮಾಡಿದರು.


LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





