ಭದ್ರಾ ಜಲಾಶಯದ ನಾಲೆಗಳಿಗೆ ನೀರು ಹರಿಸಲು ನಿರ್ಧಾರ, ಯಾವಾಗ? ಎಷ್ಟು ದಿನ? ಇಲ್ಲಿದೆ ಡಿಟೇಲ್ಸ್

 ಶಿವಮೊಗ್ಗ  LIVE 

ಶಿವಮೊಗ್ಗ: ಬೇಸಿಗೆ ಬೆಳೆಗೆ ನೀರು ಒದಗಿಸಲು ಭದ್ರಾ ಜಲಾಶಯದ (Bhadra Dam) ಎಡ ಮತ್ತು ಬಲದಂಡೆ ನಾಲೆಗಳಿಂದ 120 ದಿನ ನಿರಂತರ ನೀರು ಹರಿಸಲು ನಿರ್ಧರಿಸಲಾಗಿದೆ. ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 88ನೇ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನೀರು ಹರಿಸಲು ನಿರ್ಧರಿಸಲಾಗಿದೆ.

ಸಚಿವ ಎಸ್.ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಜನವರಿ 3ರಿಂದ ಎಡದಂಡೆ ನಾಲೆಗೆ ಮತ್ತು ಜನವರಿ 8ರಿಂದ ಬಲದಂಡೆ ನಾಲೆಗೆ ನಿರಂತರವಾಗಿ 120 ದಿನ ನೀರನ್ನು ಹರಿಸಲು ನಿರ್ಧರಿಸಲಾಗಿದೆ.  

ಮುಂದಿನ ಬೇಸಿಗೆ ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ಯಾವುದೇ ಅಡಚಣೆ ಆಗದಂತೆ ಅವಶ್ಯಕವಾಗಿರುವ ನೀರನ್ನು ಒದಗಿಸಲು ಮತ್ತು ನಗರ ಪಟ್ಟಣ ಪ್ರದೇಶಗಳಿಗೆ ಕುಡಿಯುವ ನೀರನ್ನು ಪೂರೈಸುವುದನ್ನು ಗಮನದಲ್ಲಿಟ್ಟುಕೊಂಡು ನೀರನ್ನು ಬಿಡಲು ಕ್ರಮ ಕೈಗೊಳ್ಳಲಾಗಿದೆ.ಮಧು ಬಂಗಾರಪ್ಪ, ಸಚಿವ

ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಅಂಶುಮಂತ್‌, ಶಿವಮೊಗ್ಗ ಶಾಸಕ ಎಸ್.ಎನ್.ಚನ್ನಬಸಪ್ಪ, ಹೊನ್ನಾಳಿ ಶಾಸಕ ಡಿ.ಜಿ.ಶಾಂತನಗೌಡ, ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಚಂದ್ರಭೂಪಾಲ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಆರ್.ಪ್ರಸನ್ನಕುಮಾರ್‌, ಅಭಿಯಂತರರಾದ ರವಿಕುಮಾರ್‌, ರವಿಚಂದ್ರ ಸೇರಿದಂತೆ ದಾವಣಗೆರೆ, ಬಳ್ಳಾರಿ, ಶಿವಮೊಗ್ಗ ಜಿಲ್ಲೆಗಳ ನೀರಾವರಿ ಇಲಾಖೆಯ ಅಧಿಕಾರಿಗಳು, ರೈತ ಮುಖಂಡರು ಭಾಗವಹಿಸಿದ್ದರು.‌

ಇದನ್ನೂ ಓದಿ » ಶಿವಮೊಗ್ಗದ ರಾಘವೇಂದ್ರ ಮಠಕ್ಕೆ ಇವತ್ತು ಜನವೋ ಜನ, ಎಲ್ಲ ದೇಗುಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚಳ

Bhadra Dam

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment