ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಕೆಂಚಪ್ಪ ಬಡಾವಣೆಯ ಅಂಗನವಾಡಿ ಸಮೀಪ ವಾಕಿಂಗ್ ಮಾಡುತ್ತಿದ್ದ ವೃದ್ಧೆಯೊಬ್ಬರ ಚಿನ್ನದ ಸರವನ್ನು (Chain snatching) ಕಿತ್ತುಕೊಂಡು ಪರಾರಿಯಾದ ಘಟನೆ ನಡೆದಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಕೆಲಸ ಹುಡುಕುತ್ತಿರುವವರಿಗೆ GOOD NEWS, ಇಲ್ಲಿದೆ ಉತ್ತಮ ವೇತನದ ಉದ್ಯೋಗ
ಮನೆಯ ಮುಂದೆ ವಾಕಿಂಗ್ ಮಾಡುತ್ತಿದ್ದ ಜಯಲಕ್ಷ್ಮಿ ಎಂಬುವವರನ್ನು ಹಿಂಬಾಲಿಸಿದ ಇಬ್ಬರು ಅಪರಿಚಿತರು, ಅವರ ಕೊರಳಲ್ಲಿದ್ದ ಸುಮಾರು 15 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಕಿತ್ತುಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಕಳ್ಳರು ಜಯಲಕ್ಷ್ಮಿ ಅವರನ್ನು ಕೆಳಕ್ಕೆ ತಳ್ಳಿದ್ದು, ಅವರು ಸರವನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದರಿಂದ ಸರವು ತುಂಡಾಗಿದೆ.
ಕಳ್ಳರು ಅರ್ಧದಷ್ಟು ಸರವನ್ನು ಕಿತ್ತುಕೊಂಡು ಬೈಕ್‌ನಲ್ಲಿ ಪರಾರಿಯಾಗಿದ್ದಾರೆ. ಕಳುವಾದ ಚಿನ್ನದ ಸರದ ಮೌಲ್ಯ ₹1,80,000 ಎಂದು ಅಂದಾಜಿಸಲಾಗಿದೆ. ಘಟನೆ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
LATEST NEWS
- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

- ಶಿವಮೊಗ್ಗದ JNN ಕಾಲೇಜು ವಿದ್ಯಾರ್ಥಿಗಳು ಚಾಂಪಿಯನ್ಸ್, ಯಾವ್ಯಾವ ಸ್ಪರ್ಧೆಗಳಲ್ಲಿ ಯಾರೆಲ್ಲ ಗೆದ್ದಿದ್ದಾರೆ?

- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

About The Editor
ನಿತಿನ್ ಆರ್.ಕೈದೊಟ್ಲು






