ಶಿವಮೊಗ್ಗ LIVE
ಶಿವಮೊಗ್ಗ: ಇನ್ನೋವಾ ಕಾರಿನಲ್ಲಿ ತೆರಳುತ್ತಿದ್ದವರನ್ನು ಅಡ್ಡಗಟ್ಟಿ, ಬೆದರಿಸಿ ದರೋಡೆ (robbery) ಮಾಡಲಾಗಿದೆ. ಶಿವಮೊಗ್ಗದ ಸಾಗರ ರಸ್ತೆಯ ವಾಜಪೇಯಿ ಲೇಔಟ್ ಬಳಿ ಘಟನೆ ನಡೆದಿದೆ. ದ್ವಿಚಕ್ರ ವಾಹದಲ್ಲಿ ಬಂದ ಮೂವರು ಕಿಡಿಗೇಡಿಗಳು ದುಷ್ಕೃತ್ಯ ಎಸಗಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದ ಒಂದು ರೈಲು ಜನವರಿ 4ರಂದು ರದ್ದು
ವಿನೋಬನಗರದ ನಿವಾಸಿ ಬಾಬು ಎಂಬುವವರು ಶ್ವೇತಾ ಅವರೊಂದಿಗೆ ಕಾರಿನಲ್ಲಿ ಹೋಗುತ್ತಿದ್ದರು. ದ್ವಿಚಕ್ರ ವಾಹನದಲ್ಲಿ ಬಂದ ಅಪರಿಚಿತರು ಕಾರನ್ನು ಅಡ್ಡಗಟ್ಟಿದ್ದಾರೆ. ಬಾಬು ಅವರ ಮೇಲೆ ಹಲ್ಲೆ ನಡೆಸಿ, ಅವರ ಫೋನ್ ಪೇ ಮೂಲಕ ₹4000 ವರ್ಗಾಯಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಬಾಬು ಮತ್ತು ಶ್ವೇತಾ ಅವರ ಬಳಿ ಇದ್ದ ಮೊಬೈಲ್‌ಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಬಾಬು ಮತ್ತು ಶ್ವೇತಾ ಅವರು ಕಿಮ್ಮನೆ ಗಾಲ್ಫ್ ರೆಸಾರ್ಟ್ ಮಾಲೀಕ ಕಿಮ್ಮನೆ ಜಯರಾಮ್ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಪ್ರತಿದಿನದ ಹಾಗೆ ಕಿಮ್ಮನೆ ಜಯರಾಮ್ ಅವರ ಮನೆಯಲ್ಲಿದ್ದ ನಾಯಿಗಳನ್ನು ಗಾಲ್ಫ್ ರೆಸಾರ್ಟ್‌ಗೆ ಕರೆದೊಯ್ದು ವಾಕಿಂಗ್ ಮಾಡಿಸಿ ಹಿಂತಿರುಗುವಾಗ ಘಟನೆ ನಡೆದಿದೆ.
ಗಾಯಗೊಂಡಿದ್ದ ಬಾಬು ಅವರು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

- ಶಾಲೆಯ ಕೊಠಡಿಯಲ್ಲೇ ನೇಣು ಬಿಗಿದುಕೊಂಡ ಶಿಕ್ಷಕ

About The Editor
ನಿತಿನ್ ಆರ್.ಕೈದೊಟ್ಲು






