ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಡಾಂಬರ್ ವ್ಯಾಪಾರಿಯೊಬ್ಬರಿಗೆ (bitumen trader) ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ (NHAI) ನೋಂದಣಿ ಮಾಡಿಸಿಕೊಡುವುದಾಗಿ ನಂಬಿಸಿ ₹31,06,300 ವಂಚಿಸಲಾಗಿದೆ.
ಹೇಗಾಯ್ತು ವಂಚನೆ?
ಶಿವಮೊಗ್ಗ ಜಿಲ್ಲೆಯ ಡಾಂಬಾರ್ ವ್ಯಾಪಾರಿಯೊಬ್ಬರು (ಹೆಸರು ಗೌಪ್ಯ) ತಮ್ಮ ವ್ಯಾಪಾರಕ್ಕಾಗಿ ಜಸ್ಟ್ ಡಯಲ್‌ನಲ್ಲಿ ಮೊಬೈಲ್ ಸಂಖ್ಯೆ ನೋಂದಾಯಿಸಿಕೊಂಡಿದ್ದರು. ಇದನ್ನು ಬಳಸಿಕೊಂಡ ಅಪರಿಚಿತರು, ತಾವು ರಾಕ್ಯಾಲಿಡ್ ಎಂಬ ಕಂಪನಿಯ ಅಧಿಕಾರಿಗಳೆಂದು ಪರಿಚಯಿಸಿಕೊಂಡು ಕರೆ ಮಾಡಿದ್ದರು.

ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಿಸಿದ ಕಾಮಗಾರಿಗಳಿಗೆ ಡಾಂಬರ್ ಸರಬರಾಜು ಮಾಡಲು ನೋಂದಣಿ ಅಗತ್ಯವಿದೆ ಎಂದು ನಂಬಿಸಿದ್ದರು. ಇದಕ್ಕಾಗಿ ವಿವಿಧ ಹಂತಗಳಲ್ಲಿ ನೋಂದಣಿ ಶುಲ್ಕ ಮತ್ತು ಇತರೆ ವೆಚ್ಚಗಳ ಹೆಸರಿನಲ್ಲಿ ವ್ಯಾಪಾರಿಯಿಂದ ಹಣ ವರ್ಗಾಯಿಸಿಕೊಂಡಿದ್ದರು. ಹಣ ಪಾವತಿಸಿದರೂ ನೋಂದಣಿ ಪ್ರಕ್ರಿಯೆ ನಡೆಯದಿದ್ದಾಗ ಮತ್ತು ಪುನಃ ಹಣಕ್ಕೆ ಬೇಡಿಕೆ ಇಟ್ಟಾಗ ವ್ಯಾಪಾರಿಗೆ ತಾವು ಮೋಸ ಹೋಗಿರುವುದು ಅರಿವಾಗಿದೆ.
ಇದನ್ನೂ ಓದಿ » ATMನಿಂದ ಹಿಂತಿರುಗಿ ಬ್ಯಾಂಕಿನಲ್ಲಿ ಅಕೌಂಟ್ ಚೆಕ್ ಮಾಡಿದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
ಘಟನೆ ಸಂಬಂಧ ಶಿವಮೊಗ್ಗ ಸಿಇಎನ್ (CEN) ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು





