ಶಿವಮೊಗ್ಗದಲ್ಲಿ ಟ್ರಾಫಿಕ್‌ ಫೈನ್‌ ಎಷ್ಟಿದೆ ಅಂತಾ ನೋಡಲು ಹೋಗಿ ₹11.25 ಲಕ್ಷ ಕಳೆದುಕೊಂಡ ವ್ಯಕ್ತಿ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ:‌ ವ್ಯಕ್ತಿಯೊಬ್ಬರು ತಮ್ಮ ವಾಹನದ ಟ್ರಾಫಿಕ್ ಫೈನ್ (traffic fines) ಎಷ್ಟಿದೆ ಎಂದು ನೋಡಲು ಹೋಗಿ ಬರೋಬ್ಬರಿ ₹11.25 ಲಕ್ಷ ಹಣ ಕಳೆದುಕೊಂಡಿದ್ದಾರೆ. ಶಿವಮೊಗ್ಗದ ವ್ಯಕ್ತಿಯೊಬ್ಬರ (ಹೆಸರು ಗೌಪ್ಯ) ಮೊಬೈಲ್‌ಗೆ ಅಪರಿಚಿತರು Traffic challan.Apk ಎಂಬ ಫೈಲ್ ಕಳುಹಿಸಿದ್ದರು.

ಇದನ್ನೂ ಓದಿ »  ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.com/crime-dairy/rice-mill-owner-cheated-of-%e2%82%b930-lakh/" target="_blank" rel="noopener">ಶಿವಮೊಗ್ಗದ ರೈಸ್‌ ಮಿಲ್‌ ಮಾಲೀಕನಿಗೆ ಹಾಸನದ ವ್ಯಕ್ತಿಯಿಂದ ಲಕ್ಷ ಲಕ್ಷ ವಂಚನೆ, ಆಗಿದ್ದೇನು?

ಅದನ್ನು ಇನ್‌ಸ್ಟಾಲ್ ಮಾಡಿದಾಗ ವಾಹನದ ನಂಬರ್ ಕೇಳುವ ಪೇಜ್ ಓಪನ್ ಆಗಿದೆ. ಆದರೆ ಅದರಲ್ಲಿ ಯಾವುದೇ ಮಾಹಿತಿ ಕಾಣಿಸದ ಕಾರಣ ಅವರು ಆಪ್‌ನಿಂದ ಹೊರಬಂದಿದ್ದರು.

ಆದರೆ ಈ ಘಟನೆಯಾಗಿ ಎರಡು ದಿನಗಳ ಅಂತರದಲ್ಲಿ ಶಿವಮೊಗ್ಗದ ವ್ಯಕ್ತಿಯ ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ ಒಟ್ಟು ₹11,25,000 ಹಣ ಡ್ರಾ ಆಗಿರುವುದು ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಶಿವಮೊಗ್ಗ ಸಿಇಎನ್ (CEN) ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Leave a Comment