ಶೇ.50ರಷ್ಟು ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

ಶಿವಮೊಗ್ಗ: ಗಣರಾಜ್ಯೋತ್ಸವ ಅಂಗವಾಗಿ 2026ರ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50ರ ರಿಯಾಯಿತಿ (discount sale) ದರದಲ್ಲಿ ಮಾರಾಟ ಮಾಡಲಾಗುವುದು. (ಈ ಸುದ್ದಿಯನ್ನು ಇನ್ನು 39 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ (ಸಂಪರ್ಕ ಸಂಖ್ಯೆ: 080-22107705) ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ.

ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್‌ಲೈನ್‌ನಲ್ಲಿಯೂ https://kpp.karnataka.gov.in ಶೇ 50ರ ರಿಯಾಯಿತಿ ಲಭ್ಯವಿದೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

20923-Kuvempu-Rangamandira-in-Shimoga.webp

ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಎಲ್ಲ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಮುದ್ರಿಸಿ ಪ್ರಕಟಿಸಿದೆ.

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Kuvempu-Rangamandira-in-Shimoga.webp

Leave a Comment