ಶಿವಮೊಗ್ಗ LIVE
ಶಿವಮೊಗ್ಗ: ಟೆಲಿಗ್ರಾಂ ಆ್ಯಪ್ ಮೂಲಕ ಹಣ ಹೂಡಿಕೆ ಮಾಡಿ ಹೆಚ್ಚಿನ ಲಾಭ ಗಳಿಸುವ ಆಮಿಷವೊಡ್ಡಿ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಭದ್ರಾವತಿಯ (Bhadravathi)ವ್ಯಕ್ತಿಯೊಬ್ಬರು ಟೆಲಿಗ್ರಾಂನಲ್ಲಿ ಜಾಹೀರಾತು ನೋಡಿ ಲಿಂಕ್ ಕ್ಲಿಕ್ ಮಾಡಿ ಮೋಸ ಹೋಗಿದ್ದಾರೆ.
ಹೇಗಾಯ್ತು ಮೋಸ?
ಟೆಲಿಗ್ರಾಂನಲ್ಲಿ ಲಿಂಕ್ ಕ್ಲಿಕ್ ಮಾಡಿದಾಗ, ಮಧುಮಿತಾ ಎಂಬ ಹೆಸರಿನ ಗ್ರೂಪ್ ಅಡ್ಮಿನ್ ಇವರನ್ನು ಸಂಪರ್ಕಿಸಿದ್ದಾರೆ. ತಾವು ಟಾಟಾ ಕಂಪನಿಯ ಪ್ರತಿನಿಧಿಗಳು ಎಂದು ತಿಳಿಸಿದ್ದಾರೆ. ಫ್ಯಾಷನ್ ಡಿಸೈನಿಂಗ್ ಉತ್ಪನ್ನಗಳನ್ನು ಖರೀದಿಸಿ ಟಾಸ್ಕ್ ಪೂರ್ಣಗೊಳಿಸಿದರೆ ಹೆಚ್ಚಿನ ಲಾಭ ನೀಡುವುದಾಗಿ ನಂಬಿಸಿದ್ದಾರೆ.
ಇದನ್ನು ನಂಬಿದ ಭದ್ರಾವತಿಯ ವ್ಯಕ್ತಿ ಹಂತ ಹಂತವಾಗಿ ಹಣ ಹೂಡಿಕೆ ಮಾಡಿದ್ದಾರೆ. ಡಿಸೆಂಬರ್ 18 ರಿಂದ ಡಿಸೆಂಬರ್ 25 ರ ಅವಧಿಯಲ್ಲಿ ಒಟ್ಟು ₹6,23,155 ವರ್ಗಾಯಿಸಿದ್ದಾರೆ. ತಾವು ಹೂಡಿಕೆ ಮಾಡಿದ ಹಣ ಮತ್ತು ಲಾಭ ವಾಪಸ್ ಬಾರದೇ ಇದ್ದಾಗ ತಾವು ಮೋಸ ಹೋಗಿರುವುದು ಅವರಿಗೆ ಅರಿವಾಗಿದೆ. ಘಟನೆ ಸಂಬಂಧ ಶಿವಮೊಗ್ಗ ಸಿಇಎನ್ (CEN) ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಇದನ್ನೂ ಓದಿ » ಉದ್ಯಮಿಗಳೇ ಹುಷಾರ್, ಶಿವಮೊಗ್ಗ ಜಿಲ್ಲೆಯ ಡಾಂಬಾರು ವ್ಯಾಪಾರಿಗೆ ಲಕ್ಷ ಲಕ್ಷ ಮೋಸ, ಆಗಿದ್ದೇನು?
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






