ಶಿವಮೊಗ್ಗ LIVE
ಶಿವಮೊಗ್ಗ: ರಾಜ್ಯದ ಸುದೀರ್ಘ ಅವಧಿ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆ ಹೊಂದಿದ್ದ ದೇವರಾಜ ಅರಸು ಅವರ ದಾಖಲೆಯನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸರಿಗಟ್ಟಲಿದ್ದಾರೆ. ಈ ಹಿನ್ನೆಲೆ ಅವರ ಅಭಿಮಾನಿ ಬಳಗ ಶಿವಮೊಗ್ಗದಲ್ಲಿ ಸಂಭ್ರಮಾಚರಣೆ (biryani) ಮಾಡಿತು.
ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದ ಎದುರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಟೌಟ್‌ಗೆ ಪುಷ್ಪಾರ್ಚನೆ ನೆರವೇರಿಸಿದರು.
ಯಾರೆಲ್ಲ ಏನೆಲ್ಲ ಹೇಳಿದರು?
ಕಾರ್ಯಕ್ರಮದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್, ‘ಭ್ರಷ್ಟಾಚಾರ ಮತ್ತು ಕಮಿಷನ್ ಹಾವಳಿಯ ಕಾರಣಕ್ಕೆ ಬಿಜೆಪಿ ಸರ್ಕಾರವನ್ನು ಜನರು ತಿರಸ್ಕರಿಸಿದ್ದರು. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಯಾವುದೇ ಕಮಿಷನ್ ಇಲ್ಲದೆ ಕಳೆದ ಎರಡು ವರ್ಷಗಳಲ್ಲಿ ಸುಮಾರು ₹56,000 ಕೋಟಿಯನ್ನು ನೇರವಾಗಿ ಜನರಿಗೆ ತಲುಪಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಸಿಎಂ ದೇವರಾಜ ಅರಸು ಅವರಂತೆಯೆ ಜನಸಾಮಾನ್ಯರ ಬದುಕನ್ನು ಉತ್ತಮಪಡಿಸಿದ್ದಾರೆʼ ಎಂದರು.

ಡಿಸಿಸಿ ಬ್ಯಾಂಕ್ ನಿರ್ದೇಶಕ, ಕಾಂಗ್ರೆಸ್ ಮುಖಂಡ ಎಂ.ಶ್ರೀಕಾಂತ್ ಮಾತನಾಡಿ, ‘ಸಿದ್ದರಾಮಯ್ಯ ಬಡವರ ಪರವಾದ ನಾಯಕ. ಹಿಂದೆ ದೇವರಾಜ ಅರಸು ಅವರು ಬಡವರಿಗಾಗಿ ಮಾಡಿದ ಕಾರ್ಯಕ್ರಮದ ಮಾದರಿಯನ್ನೇ ಇಂದು ಸಿದ್ದರಾಮಯ್ಯ ಅವರು ಮುಂದುವರಿಸುತ್ತಿದ್ದಾರೆ. ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಪ್ರತಿ ಮನೆಗೆ ತಲುಪುತ್ತಿವೆ. ಇದರಿಂದ ಬಡವರ ಬದುಕಿನಲ್ಲಿ ನೆಮ್ಮದಿ ನೆಲೆಸಿದೆʼ ಎಂದರು.

ಇದನ್ನು ಓದಿ » ಶಿವಮೊಗ್ಗ ಪಾಲಿಕೆಯಿಂದ ಮಹತ್ವದ ಪ್ರಕಟಣೆ, 15 ದಿನದ ಗಡುವು, ತಪ್ಪಿದಲ್ಲಿ ಕಾನೂನು ಕ್ರಮ ಗ್ಯಾರಂಟಿ
ಚಿಕನ್ ಬಿರಿಯಾನಿ, ಲಡ್ಡು ವಿತರಣೆ
ಇದೇ ವೇಳೆ ಕರುನಾಡ ದೊರೆ ಸಿದ್ದರಾಮಯ್ಯ ಅಭಿಮಾನಿ ಬಳಗದ ವತಿಯಿಂದ ಚಿಕನ್ ಬಿರಿಯಾನಿ ಮತ್ತು ಲಡ್ಡು ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸೇರಿದ್ದ ಜನರು, ಪ್ರಯಾಣಿಕರಿಗೆ ಚಿಕನ್ ಬಿರಿಯಾನಿ ಮತ್ತು ಲಡ್ಡು ವಿತರಿಸಿ ಸಂಭ್ರಮಾಚರಣೆ ಮಾಡಲಾಯಿತು.

ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ರಂಗನಾಥ್, ಯುವ ಕಾಂಗ್ರೆಸ್ ಉಪಾಧ್ಯಕ್ಷ ಗಿರೀಶ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಮಾಜಿ ಮೇಯರ್ ನಾಗರಾಜ ಕಂಕಾರಿ, ಮಾಜಿ ಉಪ ಮೇಯರ್ ಪಾಲಾಕ್ಷಿ, ಪ್ರಮುಖರಾದ ಶರತ್ ಮರಿಯಪ್ಪ, ರೇಖಾ ರಂಗನಾಥ್, ಸೈಯದ್ ಅಡ್ಡು, ಉಳ್ಳಿ ದರ್ಶನ್, ಲೋಕೇಶ್, ಕುಮರೇಶ್, ಮಂಜು ಪುರಲೆ ಸೇರಿ ಹಲವರು ಇದ್ದರು.
LATEST NEWS
- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

- ಶಾಲೆಯ ಕೊಠಡಿಯಲ್ಲೇ ನೇಣು ಬಿಗಿದುಕೊಂಡ ಶಿಕ್ಷಕ

About The Editor
ನಿತಿನ್ ಆರ್.ಕೈದೊಟ್ಲು






