ಶಿವಮೊಗ್ಗ LIVE
ಶಿವಮೊಗ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ (Government Employees) ಸಂಘದ ಜಿಲ್ಲಾ ಶಾಖೆಯ ಸಂಯುಕ್ತ ಆಶ್ರಯದಲ್ಲಿ ಜನವರಿ 17 ಮತ್ತು 18 ರಂದು ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ನಗರದ ನೆಹರೂ ಕ್ರೀಡಾಂಗಣದಲ್ಲಿ ಈ ಎರಡು ದಿನಗಳ ಕಾಲ ವಿವಿಧ ಸ್ಪರ್ಧೆಗಳು ನಡೆಯಲಿವೆ ಎಂದು ಸಂಘದ ಜಿಲ್ಲಾಧ್ಯಕ್ಷ ಆರ್. ಮೋಹನ್ ಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ » ಪರೀಕ್ಷೆಗು ಮೊದಲೇ ವಾಟ್ಸಪ್ನಲ್ಲಿ ಹರಿದಾಡಿದ ಪ್ರಶ್ನೆ ಪತ್ರಿಕೆ, ಶಿವಮೊಗ್ಗದಲ್ಲಿ ಕೇಸ್
ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್.ಮೋಹನ್ ಕುಮಾರ್, ಜನವರಿ 17 ರಂದು ನೆಹರು ಕ್ರೀಡಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಉದ್ಘಾಟನೆ ನೆರವೇರಿಸಲಿದ್ದಾರೆ. ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಬಿ.ವೈ. ರಾಘವೇಂದ್ರ ಧ್ವಜಾರೋಹಣ ನೆರವೇರಿಸಲಿದ್ದು, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಸೇರಿದಂತೆ ಜಿಲ್ಲೆಯ ಹಲವು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ಎಲ್ಲೆಲ್ಲಿ ಏನೇನು ಸ್ಪರ್ಧೆಗಳು ನಡೆಯಲಿವೆ?
» ನೆಹರು ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್, ಥ್ರೋಬಾಲ್, ವಾಲಿಬಾಲ್ ಸ್ಪರ್ಧೆಗಳು ನಡೆಯಲಿವೆ.
» ಗೋಪಾಳದ ಕ್ರೀಡಾ ಸಂಕೀರ್ಣದಲ್ಲಿ ಈಜು ಮತ್ತು ಟೇಬಲ್ ಟೆನಿಸ್ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
» ಸರ್ಕಾರಿ ನೌಕರರ ಭವನದಲ್ಲಿ ಶಾಸ್ತ್ರೀಯ ಸಂಗೀತ, ವೆಸ್ಟ್ರನ್ ಸಾಂಗ್, ಸೋಲೋ ಡ್ಯಾನ್ಸ್ ಸ್ಪರ್ಧೆ ನಡೆಯಲಿದೆ.
» ಡಿವಿಎಸ್ ಶಿಕ್ಷಣ ಸಂಸ್ಥೆಯ ಸಿಂಗಾರ ಸಭಾಂಗಣದಲ್ಲಿ ವಾದ್ಯಗಳು, ಪ್ರೆಸ್ ಟ್ರಸ್ಟ್ ಹಾಲ್ನಲ್ಲಿ ಶಾಸ್ತ್ರೀಯ ನೃತ್ಯ, ನೌಕರರ ವಿಕಾಸ ಕೇಂದ್ರದಲ್ಲಿ ಜಾನಪದ ನೃತ್ಯ, ಅಂಬೇಡ್ಕರ್ ಭವನದಲ್ಲಿ ಕಿರು ನಾಟಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
» ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವ ನೌಕರರು ಜನವರಿ 17ರ ಬೆಳಿಗ್ಗೆ 8 ರಿಂದ 10 ಗಂಟೆಯೊಳಗೆ ಕಡ್ಡಾಯವಾಗಿ ಹೆಸರು ನೋಂದಾಯಿಸಿಕೊಳ್ಳಬೇಕು.
» ಕ್ರೀಡಾಕೂಟದಲ್ಲಿ ಭಾಗವಹಿಸುವ ನೌಕರರಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ.

ಸುದಿಗೋಷ್ಠಿಯಲ್ಲಿ ಜಿಲ್ಲಾ ಕಾರ್ಯದರ್ಶಿ ಆರ್.ಪಾಪಣ್ಣ, ಹಿರಿಯ ಉಪಾಧ್ಯಕ್ಷ ಜಿ.ಎಂ.ದಿನೇಶ್, ನರಸಿಂಹಮೂರ್ತಿ, ಕೃಷ್ಣಮೂರ್ತಿ, ಮಾರುತಿ, ಚೇತನ್ ಸೇರಿದಂತೆ ಪ್ರಮುಖರು ಇದ್ದರು.
LATEST NEWS
- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

- ಶಾಲೆಯ ಕೊಠಡಿಯಲ್ಲೇ ನೇಣು ಬಿಗಿದುಕೊಂಡ ಶಿಕ್ಷಕ

About The Editor
ನಿತಿನ್ ಆರ್.ಕೈದೊಟ್ಲು





