ಶಿವಮೊಗ್ಗದ ಮತ್ತೆರಡು ಇಂದಿರಾ ಕ್ಯಾಂಟೀನ್‌ಗಳು ಉದ್ಘಾಟನೆಗೆ ಟೈಮ್‌ ಫಿಕ್ಸ್‌

 ಶಿವಮೊಗ್ಗ  LIVE 

ಶಿವಮೊಗ್ಗ: ನಗರದಲ್ಲಿ ನಿರ್ಮಿಸಲಾಗಿರುವ ಮತ್ತೆರಡು ಇಂದಿರಾ ಕ್ಯಾಂಟೀನ್‌ಗಳು (Indira Canteen) ಶನಿವಾರ ಉದ್ಘಾಟನೆಯಾಗಲಿವೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೂತನ ಇಂದಿರಾ ಕ್ಯಾಂಟೀನ್‌ಗಳಿಗೆ ಚಾಲನೆ ನೀಡಲಿದ್ದಾರೆ.

ನಾಳೆ ಶಿವಮೊಗ್ಗಕ್ಕೆ ಮಿನಿಸ್ಟರ್‌

ಸಚಿವ ಮಧು ಬಂಗಾರಪ್ಪ ಜನವರಿ 10ರಂದು ಬೆಳಗ್ಗೆ 5 ಗಂಟೆಗೆ ಬೆಂಗಳೂರಿನಿಂದ ಹೊರಡಲಿದ್ದಾರೆ. ಬೆಳಗ್ಗೆ 9.30ಕ್ಕೆ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಬೆಳಗ್ಗೆ 10.30ಕ್ಕೆ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ನೂತನ ಕಟ್ಟಡಕ್ಕೆ ಸ್ಥಳ ವೀಕ್ಷಣೆ ಮಾಡಲಿದ್ದಾರೆ. ಬೆಳಗ್ಗೆ 11.30ಕ್ಕೆ ವಿದ್ಯಾನಗರ, ಮಧ್ಯಾಹ್ನ 12ಕ್ಕೆ ಎರಡು ಕಡೆಗಳಲ್ಲಿ ಇಂದಿರಾ ಕ್ಯಾಂಟೀನ್‌ಗಳಿಗೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಶಿವಮೊಗ್ಗದ ಗುತ್ಯಪ್ಪ ಕಾಲೋನಿಗೆ ಭೇಟಿ ನೀಡಲಿದ್ದಾರೆ.

Madhu-Bangarappa-meeting-at-Shimoga-DC-office.

ಸಂಜೆ 4ಕ್ಕೆ ಭಾರತ್‌ ಸ್ಕೌಡ್ಸ್‌ ಅಂಡ್‌ ಗೈಡ್ಸ್‌ ಜಿಲ್ಲಾ ಸಂಸ್ಥೆಯ ಶತಮಾನೋತ್ಸವ, ಜಿಲ್ಲಾಮಟ್ಟದ ರಾಲಿಗೆ ಚಾಲನೆ ನೀಡಲಿದ್ದಾರೆ. ಸಂಜೆ 4.30ಕ್ಕೆ ಶರಾವತಿ ದಂತ ಮಹಾವಿದ್ಯಾಲಯ ಸಭಾಂಗಣದಲ್ಲಿ ಮಲ್ನಾಡ್‌ ಇಂಟರ್‌ನ್ಯಾಷನಲ್‌ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 6.30ಕ್ಕೆ ಸೊರಬದ ಗುಂಡಶೆಟ್ಟಿಕೊಪ್ಪದ ಜ್ಞಾನ ಸಹ್ಯಾದ್ರಿ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಸಚಿವರು ಪಾಲ್ಗೊಳ್ಳಲಿದ್ದಾರೆ. ಸೊರಬದಲ್ಲಿ ವಾಸ್ತವ್ಯ ಮಾಡಲಿದ್ದಾರೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment