ಶಿವಮೊಗ್ಗದಲ್ಲಿ ಕುಸಿದು ಬಿದ್ದು ಕಂಪ್ಯೂಟರ್‌ ಸೈನ್ಸ್‌ ಇಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

 ಶಿವಮೊಗ್ಗ  LIVE 

ಶಿವಮೊಗ್ಗ: ನಗರದ ಪೆಸಿಟ್‌ ಕಾಲೇಜಿನ ಇಂಜಿನಿಯರಿಂಗ್ (Engineering) ವಿದ್ಯಾರ್ಥಿಯೊಬ್ಬರು ಹಾಸ್ಟೆಲ್ ಸ್ನಾನಗೃಹದಲ್ಲಿ ಕುಸಿದುಬಿದ್ದು ಮೃತಪಟ್ಟಿದ್ದಾರೆ. ಬಳ್ಳಾರಿ ಮೂಲದ ಗಣೇಶ್(21) ಮೃತ.

ಪೆಸಿಟ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ಓದುತ್ತಿದ್ದರು. ಶಿವಮೊಗ್ಗ ವಾಜಪೇಯಿ ಬಡಾವಣೆಯ ಮೆಟ್ರಿಕ್‌ ನಂತರದ ಹಾಸ್ಟೆಲ್‌ನಲ್ಲಿದ್ದರು. ಶುಕ್ರವಾರ ಬೆಳಗ್ಗೆ ಸ್ನಾನಗೃಹಕ್ಕೆ ತೆರಳಿದ್ದಾಗ ಹೃದಯಾಘಾತದಿಂದ ಕುಸಿದು ಬಿದ್ದಿದ್ದರು. ಸ್ನೇಹಿತರು ಕೂಡಲೆ ಗಣೇಶ್‌ನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಮಾರ್ಗಮಧ್ಯೆ ಅಸುನೀಗಿದ್ದಾರೆ.

Engineering-Student-heart-attack-in-shimoga.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment