ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಕಾಸರಗೋಡು ಜಿಲ್ಲೆಯ ಕನ್ನಡ ಶಾಲೆಗಳಲ್ಲಿ ಮಲೆಯಾಳಂ ಭಾಷೆಯನ್ನು ಕಡ್ಡಾಯಗೊಳಿಸುವ ಕೇರಳ (Kerala) ಸರ್ಕಾರದ ನಿರ್ಧಾರ ಖಂಡಿಸಿ ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಟೈರ್ಗೆ ಬೆಂಕಿ ಹಚ್ಚಿ, ಕಪ್ಪುಪಟ್ಟಿ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಕುಸಿದು ಬಿದ್ದು ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು
ಭಾಷಾ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಕಲಿಕೆಯ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಈ ಕ್ರಮವು ಸರ್ವಾಧಿಕಾರಿ ಧೋರಣೆಯಾಗಿದೆ. ಕಾಸರಗೋಡಿನಲ್ಲಿ ಸುಮಾರು 210 ಕನ್ನಡ ಶಾಲೆಗಳಿವೆ. 7.5 ಲಕ್ಷಕ್ಕೂ ಹೆಚ್ಚು ಕನ್ನಡಿಗರು ವಾಸಿಸುತ್ತಿದ್ದಾರೆ. ಮಲೆಯಾಳಂ ಭಾಷಾ ಮಸೂದೆಯನ್ನು ವಿಧಾನಸಭೆಯಲ್ಲಿ ಚರ್ಚಿಸದೆ ಏಕಪಕ್ಷೀಯವಾಗಿ ಜಾರಿಗೆ ತರುತ್ತಿರುವುದು ಕನ್ನಡ ಶಾಲೆಗಳನ್ನು ಮುಚ್ಚುವ ಪಿತೂರಿಯಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಪ್ರತಿಭಟನೆಯಲ್ಲಿ ಪ್ರಮುಖರಾದ ಕಲ್ಲೂರು ಮೇಘರಾಜ್, ಶಂಕ್ರಾನಾಯ್ಕ, ಎಸ್.ಬಿ. ಶಿವಣ್ಣ, ರಘುನಾಥ್ ಅರಸಾಳು, ಅಲೀಂಖಾನ್, ಟಿ.ಹೆಚ್. ಬಾಬು, ಜಗದೀಶ್ ಕೆ.ಜಿ., ಈಶ್ವರ್, ಹಯಾತ್ಪಾಬ್, ರೋಷನ್ ಬೇಗ್, ಜನಮೇಜಿರಾವ್ ಸೇರಿದಂತೆ ಹಲವರು ಇದ್ದರು.
LATEST NEWS
- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

About The Editor
ನಿತಿನ್ ಆರ್.ಕೈದೊಟ್ಲು





