ಸೂಡೂರು ಬಳಿ ಅಪಘಾತ, ಕೃಷಿ ಇಲಾಖೆ ನಿವೃತ್ತ ಅಧಿಕಾರಿ ಸಾವು, ಹೇಗಾಯ್ತು ಘಟನೆ?

ರಿಪ್ಪನ್‌ಪೇಟೆ: ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ 9ನೇ ಮೈಲಿಕಲ್ಲು ಹಾಗೂ ಸೂಡೂರು ಗೇಟ್ ನಡುವಿನ ತಿರುವಿನಲ್ಲಿ ಶನಿವಾರ ಸಂಜೆ ವಾಹನ ಡಿಕ್ಕಿ (Road Accident) ಹೊಡೆದು ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಯನೂರು ಸಮೀಪದ ಹೊಸೂರು ನಿವಾಸಿ, ನಿವೃತ್ತ ಸಹಾಯಕ ಕೃಷಿ ಅಧಿಕಾರಿ ಸುಬ್ರಹ್ಮಣ್ಯ ಜಿ.ಎಸ್ (65) ಮೃತರು. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಂಜಪ್ಪ ಲೈಫ್‌ ಕೇರ್‌ನಲ್ಲಿ ಉಚಿತ ಸಮಾಲೋಚನೆ, 40% ರಿಯಾಯಿತಿ Nanjappa Hospital Advertisement ಇಲ್ಲಿ ಕ್ಲಿಕ್‌ ಮಾಡಿ ನೇರವಾಗಿ ಕರೆ ಮಾಡಿ ಹೆಸರು ನೋಂದಾಯಿಸಿ

ತೀರ್ಥಹಳ್ಳಿ ತಾಲೂಕಿನ ಅಂಬು ತೀರ್ಥ ಗ್ರಾಮದ ಸಂಬಂಧಿಕರ ಮನೆಯಲ್ಲಿ ವೈಕುಂಠ ಸಮಾರಾಧನೆ ಕಾರ್ಯಕ್ರಮ ಮುಗಿಸಿ ಊರಿಗೆ ಹಿಂದಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಇವರಿಗೆ ಪತ್ನಿ ಹಾಗೂ ಪುತ್ರಿ ಇದ್ದಾರೆ. ರಿಪ್ಪನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ACCIDENT-NEWS-GENERAL-IMAGE.

ಇದನ್ನೂ ಓದಿ » ಹೊಸನಗರ ತಾಲೂಕಿನ ಹಲವೆಡೆ ಜನವರಿ 11ರಂದು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment