ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಬೆಂಗಳೂರು: ರಾಜ್ಯದ ಉತ್ತರ ಒಳನಾಡು ಭಾಗದಲ್ಲಿ ಮುಂದಿನ 24 ಗಂಟೆಗಳಲ್ಲಿ ಶಿತಗಾಳಿ ಬೀಸಲಿದ್ದು, ತೀವ್ರ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಒಳನಾಡು ಪ್ರದೇಶಗಳಲ್ಲಿ ಕನಿಷ್ಠ ಶಾನಮಾನ ಸಾಮಾನ್ಯಕ್ಕಿಂತಲೂ 3 ರಿಂದ 6 ಡಿಗ್ರಿ ಸೆಲ್ಸಿಯಸ್‌ನಷ್ಟು ಕುಸಿತ (cold wave) ಕಾಣಲಿದೆ.
ಇದನ್ನೂ ಓದಿ » ಅಡಿಕೆ ಸುಲಿಯಲು ಬಂದಿದ್ದ ಕಾರ್ಮಿಕನಿಂದ ಮಾಲೀಕರ ಬೊಲೆರೋ ವಾಹನ ಕಳ್ಳತನ
ತೀವ್ರ ಚಳಿಗೆ ಕಾರಣವೇನು?
ಬಂಗಾಳ ಕೊಲ್ಲಿಯ ನೈರುತ್ಯ ಹಾಗೂ ಶ್ರೀಲಂಕಾದ ಈಶಾನ್ಯ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಉತ್ತರ ವಾಯವ್ಯ ದಿಕ್ಕಿಗೆ ಮಾರುತಗಳು ಚಲಿಸುತ್ತಿವೆ. ಇದು ಕರ್ನಾಟಕದಲ್ಲಿ ಮಳೆ ತರಿಸುವ ಸಾಧ್ಯತೆಗಳಿದೆ ಎಂದು ಅಂದಾಜಿಸಲಾಗಿದೆ. ಮೈಸೂರು, ಮಂಡ್ಯ ಭಾಗದಲ್ಲಿ ಮಳೆಯಾಗಿದೆ.
ತಮಿಳುನಾಡಿಗೆ ಮಳೆ ಅಲರ್ಟ್
ಗಾಳಿಯು ವೇಗವಾಗಿ ಪಶ್ಚಿಮ ವಾಯುವ್ಯ ದಿಕ್ಕಿನತ್ತ ಚಲಿಸುತ್ತಿದೆ. ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಶ್ರೀಲಂಕಾ ಕರಾವಳಿಯನ್ನು ದಾಟುವ ಸಾಧ್ಯತೆಯಿದೆ. ಇದರ ಪರಿಣಾಮ ತಮಿಳುನಾಡಿನ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಆದ್ದರಿಂದ ತಮಿಳುನಾಡಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಚಳಿಯ ತೀವ್ರತೆ ಹೆಚ್ಚಳ
ದೇಶದ ಉತ್ತರ ಮತ್ತು ಈಶಾನ್ಯ ಭಾಗಗಳಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದೆ. ಇನ್ನು 5 ರಿಂದ 7 ದಿನಗಳವರೆಗೆ ಪಂಜಾಬ್, ಹರಿಯಾಣ, ರಾಜಸ್ಥಾನ ಮತ್ತು ಬಿಹಾರ ರಾಜ್ಯಗಳಲ್ಲಿ ದಟ್ಟವಾದ ಮಂಜು ಕವಿಯಲಿದೆ. ದೆಹಲಿ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದ ಕೆಲವು ಭಾಗಗಳಲ್ಲಿಯೂ ದಟ್ಟ ಮಂಜು ಇರಲಿದೆ. ದೃಷ್ಟಿಗೋಚರತೆ 50 ಮೀಟರ್‌ಗಿಂತಲೂ ಕಡಿಮೆ ಇರುವ ಸಾಧ್ಯತೆಯಿದೆ. ಈ ರಾಜ್ಯಗಳಲ್ಲಿ ತೀವ್ರವಾದ ಶೀತಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















