ಐದು ವರ್ಷದ ಚಿರತೆಯ ಮೃತದೇಹ ಪತ್ತೆ, ಎಲ್ಲಿ? ಆಗಿದ್ದೇನು?

ಹೊಸನಗರ: ತಾಲೂಕಿನ ಯಡೂರು ಗ್ರಾಮದಲ್ಲಿ ಶನಿವಾರ ಚಿರತೆಯ ಮೃತದೇಹ (Dead leopard) ಪತ್ತೆಯಾಗಿದೆ. ಬೆಳಗ್ಗೆ ಅರಣ್ಯ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಯಡೂರು ಗ್ರಾಮದಲ್ಲಿ ಚಿರತೆಯ ಮೃತದೇಹ ಪತ್ತೆಯಾಗಿದೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಂಜಪ್ಪ ಲೈಫ್‌ ಕೇರ್‌ನಲ್ಲಿ ಉಚಿತ ಸಮಾಲೋಚನೆ, 40% ರಿಯಾಯಿತಿ Nanjappa Hospital Advertisement ಇಲ್ಲಿ ಕ್ಲಿಕ್‌ ಮಾಡಿ ನೇರವಾಗಿ ಕರೆ ಮಾಡಿ ಹೆಸರು ನೋಂದಾಯಿಸಿ

ಮರಣೋತ್ತರ ಪರೀಕ್ಷೆಯ ನಂತರ ಚಿರತೆ 5 ವರ್ಷದ ಪ್ರಾಯದ್ದು ಎಂದು ಗೊತ್ತಾಗಿದೆ. ಮೇಲ್ನೋಟಕ್ಕೆ ಸ್ವಾಭಾವಿಕ ಸಾವು ಎಂದು ತಿಳಿದುಬಂದಿದೆ. ಆರ್‌ಎಫ್‌ಒ ಸಂತೋಷ ಮಲ್ಲನಗೌಡ್ರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪಶು ವೈದ್ಯಾಧಿಕಾರಿಗಳಿಂದ ಮರಣೋತ್ತರ ಪರೀಕ್ಷೆ ನಡೆದು ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ.

Dead-leopard-found-in-Yaduru-village-Hosanagara

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮನೆಯೊಳಗೆ ನುಗ್ಗಿ ವೃದ್ಧೆಯ ಕೈಲಿದ್ದ ರೋಲ್ಡ್‌ ಗೋಲ್ಡ್‌ ಬಳೆ ಕದ್ದೊಯ್ದ ಕಳ್ಳರು..!

ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಮೃತದೇಹ ಪತ್ತೆಯಾದ ಜಾಗದಲ್ಲೇ ನಿಯಮಾನುಸಾರ ಅಂತ್ಯಕ್ರಿಯೆ ಮಾಡಲಾಯಿತು. ತಹಸೀಲ್ದಾ‌ರ್ ಭರತ್ ರಾಜ್, ಎಸಿಎಫ್ ಮೋಹನ್ ಕುಮಾರ್, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Dead-leopard-found-in-Yaduru-village-Hosanagara
📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment