ಶಿಕಾರಿಪುರ: ತಾಲೂಕಿನ ಶೀರಿಹಳ್ಳಿ ತಾಂಡಾದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ (Decomposed Body) ಪತ್ತೆಯಾಗಿದೆ. ಕಳೆದ ಕೆಲವು ದಿನಗಳಿಂದ ಈ ವ್ಯಕ್ತಿ ಕಾಣೆಯಾಗಿದ್ದು, ಕುಟುಂಬಸ್ಥರು ಹುಡುಕಾಟ ನಡೆಸುತ್ತಿದ್ದರು. ಇದೀಗ ತಾಂಡಾದ ಸಮೀಪವೇ ಶವ ಪತ್ತೆಯಾಗಿದೆ.
ರುಕ್ಮಪ್ಪ (50) ಮೃತರು. ಗ್ರಾಮದ ಜಮೀನಿನ ಬಳಿ ತೀವ್ರ ವಾಸನೆ ಬರುತ್ತಿದ್ದ ಕಾರಣ ಗಮನಿಸಿದಾಗ ಘಟನೆ ಬೆಳಕಿಗೆ ಬಂದಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವವು ಸಂಪೂರ್ಣವಾಗಿ ಕೊಳೆತು ಹೋಗಿದೆ. ಸಾವಿಗೆ ನಿಖರ ಕಾರಣ ತಿಳಿಯಬೇಕಿದೆ. ಸದ್ಯಕ್ಕೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ. ಶಿರಾಳಕೊಪ್ಪ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಮನೆಯೊಳಗೆ ನುಗ್ಗಿ ವೃದ್ಧೆಯ ಕೈಲಿದ್ದ ರೋಲ್ಡ್ ಗೋಲ್ಡ್ ಬಳೆ ಕದ್ದೊಯ್ದ ಕಳ್ಳರು..!







