ಶಿವಮೊಗ್ಗ LIVE
ಸಾಗರ: ತಾಲೂಕಿನ ಹಕ್ರೆ ಗ್ರಾಮದ ಬಳಿ ಶರಾವತಿ ಹಿನ್ನೀರಿನಲ್ಲಿ ಈಜಲು ತೆರಳಿದ್ದ ಪಶು ವೈದ್ಯಾಧಿಕಾರಿಯೊಬ್ಬರು (Doctor) ಮೃತಪಟ್ಟಿದ್ದಾರೆ. ಮಾಸೂರು ಪಶು ಆಸ್ಪತ್ರೆಯ ವೈದ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಸುನಿಲ್ (38) ಮೃತರು.
ಭಾನುವಾರ ರಜೆಯ ಹಿನ್ನೆಲೆ ಕುಟುಂಬದವರ ಜೊತೆಗೆ ಹಕ್ರೆ ಹಿನ್ನೀರು ಪ್ರದೇಶಕ್ಕೆ ತೆರಳಿದ್ದರು. ಹಿನ್ನೀರು ಭಾಗದಲ್ಲಿ ಈಜಲು ಇಳಿದಾಗ ಡಾ. ಸುನಿಲ್ ನಾಪತ್ತೆಯಾಗಿದ್ದಾರೆ ಎಂದು ಆರೋಪಿಸಲಾಗಿದೆ.
ತಕ್ಷಣ ಸ್ಥಳೀಯರಿಗೆ ಮಾಹಿತಿ ತಿಳಿಸಲಾಗಿತ್ತು. ಸ್ಥಳಕ್ಕೆ ಸಾಗರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ, ಈಜುಗಾರರ ಸಹಾಯದೊಂದಿಗೆ ನಾಪತ್ತೆಯಾದ ವೈದ್ಯರಿಗಾಗಿ ತೀವ್ರ ಹುಡುಕಾಟ ನಡೆಸಿದರು. ಮೃತದೇಹ ಪತ್ತೆಯಾಗಿದೆ. ಸಾಗರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ » ಸೂಡೂರು ಬಳಿ ಅಪಘಾತ, ಕೃಷಿ ಇಲಾಖೆ ನಿವೃತ್ತ ಅಧಿಕಾರಿ ಸಾವು, ಹೇಗಾಯ್ತು ಘಟನೆ?
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






